ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ನಗರದಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ತಾಂಜೇನಿಯಾದ ಮಹಿಳೆ ನಾನ್ಸಿ ಒಮೆರೈ ಲಾವ(29) ಹಾಗೂ ನೈಜೀರಿಯಾದ ಇಮಾನುಯಲ್ ಆರೇಂಜಿ(28)ಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೂರು ಪ್ರಕರಣಗಳಲ್ಲಿ ಬಂಧಿತರಿಂದ 28.75 ಕೋಟಿ ಮೌಲ್ಯದ10 ಕೆ.ಜಿ 369 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 8 ಕೆ.ಜಿ ಹೈಡ್ರೋಗಾಂಜಾ ಹಾಗೂ ಇತರೆ ವಸ್ತುಗಳ ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.
ಸಂಪಿಗೆಹಳ್ಳಿಯ ರಾಚೇನಹಳ್ಳಿಯಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ನಾನ್ಸಿ ಒಮೆರೈ ಲಾವ ಹೇರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು, ಹಣದಾಸೆಗೆ ಡ್ರಗ್ ಮಾರಾಟ ದಂಧೆಯಲ್ಲಿ ತೊಡಗಿದ್ದಳು ಎಂದರು.
ಆರೋಪಿ ಮಹಿಳೆಯು ಮನೆಯಲ್ಲಿ ಎಂಡಿಎಂಎ ಡ್ರಗ್ಸ್ ನ್ನು ದಾಸ್ತಾನು ಮಾಡಿಕೊಂಡು ನೂತನ ವರ್ಷಾಚರಣೆ ಸಂದರ್ಭದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಲು ಸಂಚು ರೂಪಿಸಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿ ಬಂಧಿಸಲಾಗಿದೆ ಎಂದರು.



