ಕಾರವಾರ: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಗಸ್ಟ್ 1 ರಂದು ಆಯೋಜಿಸುವ ವ್ಯಸನ ಮುಕ್ತ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವಂತೆ ಮತ್ತು ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ನಿರ್ದೇಶನ ನೀಡಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಕಚೇರಿ ಸಭಾಂಗಣದಲ್ಲಿ, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 1 ರಂದು ನಡೆಯುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿ, ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವಂತೆ ತಿಳಿಸಿದರು. ಮದ್ಯ ಮತ್ತು ಮಾದಕ ವ್ಯಸನಗಳಿಂದ ಮುಕ್ತರಾದವರನ್ನು ಅಭಿನಂದಿಸುವ ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಗ್ರೇಡ್-2 ತಹಶೀಲ್ದಾರ ರೂಪಾ ಬಾಡಕರ, ಮೆಡಿಕಲ್ ಕಾಲೇಜಿನ ಮನೋವೈದ್ಯ ವಿಭಾಗದ ಮುಖ್ಯಸ್ಥ ಡಾ.ವಿಜಯರಾಜ ಎನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಎಸ್ ಯೂಸಫ್ ಖಾನ್, ಪೊಲೀಸ್ ಇನ್ಸಪೆಕ್ಟರ್ ನಿತ್ಯಾನಂದ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾನಾಯ್ಕ, ಶಾಲಾ ಶಿಕ್ಷಣ ಇಲಾಖೆಯ ಕಲ್ಪನಾ ನಾಯಕ ಹಾಜರಿದ್ದರು.




