ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಈ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್, ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಟಿಕೆಟ್ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.
ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದ ಸಿದ್ದರಾಮಯ್ಯ, ಈ ಟಿಕೆಟ್ ಸ್ವೀಕರಿಸಿದ ಮಹಿಳೆ ಲತಾ ಅವರನ್ನು ಸನ್ಮಾನಿಸಿದರು. ಇದೇ ಬಸ್ಸಿನಲ್ಲಿದ್ದ ಇತರೆ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಿಸಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.








