ಮಂಗಳಜ್ಯೋತಿಯಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ

2 years ago

#Celebration #Diwali #festival #lights #Mangaljyoti #mangalore

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮವನ್ನು ತಾ. 12-11-2023ರಂದು ಆದಿತ್ಯವಾರ ಸಂಜೆ 5 ಗಂಟೆಗೆ ವಾಮಂಜೂರಿನ ಮಂಗಳಜ್ಯೋತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆಯು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮವನ್ನು ದ.ಕ. ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾ.ಸುದೀಪ್ ಪೌಲ್, ಪ್ರಗತಿಪರ ಅಧ್ಯಾಪಕರ ವೇದಿಕೆಯ ಅಧ್ಯಕ್ಷ ಡಾ.ವಸಂತ ಕುಮಾರ್, ಪ್ರಗತಿಪರ ಚಿಂತಕ,ನಿವೃತ್ತ ಪ್ರಾಂಶುಪಾಲ ಡಾ.ಎನ್.ಇಸ್ಮಾಯಿಲ್ ಹಾಗೂ ಮಂಗಳಜ್ಯೋತಿ ಕೊರಗಜ್ಜ ಸೇವಾ ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣ್ ವಾಮಂಜೂರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋರವರು ವಹಿಸಲಿದ್ದಾರೆ.

ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಕಳೆದ 7 ವರ್ಷಗಳಿಂದ ಸತತವಾಗಿ ಸೌಹಾರ್ದತೆಗಾಗಿ ವಿವಿಧ ಹಂತದ ಕಾರ್ಯಕ್ರಮಗಳನ್ನು ಆಯೋಜಿಸಿ ಜನತೆಯ ಹ್ರದಯ ಗೆದ್ದ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಎಲ್ಲಾ ಧರ್ಮಗಳ ಹಬ್ಬವನ್ನು ಸರ್ವಧರ್ಮದ ಜನತೆ ಒಟ್ಟಾಗಿ ಆಚರಿಸುವ ಮೂಲಕ ದ್ವೇಷ ತುಂಬಿದ ನಾಡಿನಲ್ಲಿ ಪ್ರೀತಿ ಹಂಚುವ ಸತ್ಕಾರ್ಯದ ಭಾಗವಾಗಿ ಸೌಹಾರ್ದ ದೀಪಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆದ್ದರಿಂದ ಮಾನವೀಯ ಹೃದಯಗಳು, ಜಾತ್ಯತೀತ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

Leave a Reply