ಜನಗಣತಿ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಮುಂದುವರೆಯುತ್ತಲೇ ಇದೆ: ಆರ್ ಅಶೋಕ

10 months ago

ಬೆಂಗಳೂರು: 10 ವರ್ಷಗಳ ಹಿಂದೆ ಆರಂಭವಾದ ಸಿಎಂ @siddaramaiah ನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ.

ಮರು ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಆರ್ ಅಶೋಕ, ನಿಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ ಜಾತಿ ಜನಗಣತಿಯ ಕಾರ್ಡ್ ಬಳಸಿ ಪರಿಶಿಷ್ಟ ಸಮುದಾಯಗಳಿಗೆ, ಹಿಂದುಳಿದ ವರ್ಗಗಳಿಗೆ ಯಾಕೆ ಅಪಮಾನ ಮಾಡುತ್ತೀರಿ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ. ಸಾಕು ಮಾಡಿ ನಿಮ್ಮ ನಾಟಕ ಎಂದಿದ್ದಾರೆ.

ದಶವಾರ್ಷಿಕ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಸೇರಿಸಲು ಪ್ರಧಾನಿ ಶ್ರೀ @narendramodi ಅವರ ನೇತೃತ್ವದ ಕೇಂದ್ರದ NDA ಸರ್ಕಾರ ಈಗಾಗಲೇ ನಿರ್ಧಾರ ಮಾಡಿದೆ. ಈಗ ಮತ್ತೊಮ್ಮೆ ಕನ್ನಡಿಗರ ಬೆವರಿನ ತೆರಿಗೆ ಹಣವನ್ನ ವಿನಾಕಾರಣ ದುಂದುವೆಚ್ಚ ಮಾಡಿ ಅಪವ್ಯಯ ಮಾಡಬೇಡಿ ಎಂದಿದ್ದಾರೆ.

Leave a Reply