ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ರಾಷ್ಟ್ರದ ಎಲ್ಲಾ ರಾಜ್ಯಗಳಿಗೆ ನ್ಯಾಯ ದೊರಕಿಸುವಲ್ಲಿ ವಿಫಲವಾಗಿದೆ. ಬಿಹಾರ್, ಆಂಧ್ರಪ್ರದೇಶ ಮತ್ತು ಅಸ್ಸಾಂ ರಾಜ್ಯಗಳನ್ನು ಹೊರತುಪಡಿಸಿ ಯಾವುದೇ ರಾಜ್ಯಗಳಿಗೆ ಸೂಕ್ತ ಅನುದಾನ ನೀಡಿಲ್ಲ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಬಜೆಟ್ ಜನಸಾಮಾನ್ಯರ ವಿರುದ್ಧವಾಗಿದೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಶೋಷಿತ ವರ್ಗಗಳಿಗೆ ವಿರುದ್ಧವಾಗಿದೆ.ಯಾವುದರಲ್ಲಿಯೂ ಸರ್ವತೋಮುಖ ಕಾರ್ಯಕ್ರಮಗಳನ್ನು ರೂಪಿಸಿಲ್ಲ.
ಶೋಷಿತ ವರ್ಗಗಳಿಗೆ ಅನ್ಯಾಯ: ಐವತ್ತು ಲಕ್ಷಕ್ಕೂ ಮೇಲ್ಪಟ್ಟ ಬಜೆಟ್ ನಲ್ಲಿ ಸುಮಾರು 10 ಲಕ್ಷಕ್ಕೂ ಮೇಲ್ಪಟ್ಟು ಶೋಷಿತ ವರ್ಗಗಳಾದ ಎಸ್ಸಿ ಎಸ್ಟಿ ಸಮುದಾಯದವರಿಗೆ ಅವಕಾಶ ಇರಬೇಕಿತ್ತು.
ಭಾತರ ದೇಶದಲ್ಲಿ ಸುಮಾರು ಶೇ 20% ರಷ್ಟು ಜನಸಂಖ್ಯೆ ಯನ್ನು ಹೊಂದಿರುವ ಈ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕಾಳಜಿ ಇಲ್ಲ. ಸಂವಿಧಾನ ಬದ್ದವಾಗಿ ಈ ರಾಷ್ಟ್ರದಲ್ಲಿ ಸಿಗುತ್ತಿಲ್ಲಾ. ಒಂದು ಕಡೆ ಸೀಮಿತವಾಗಿ ಕೆಲವು ರಾಜ್ಯಗಳಿಗೆ ಸಂಪೂರ್ಣ ಪ್ರೋತ್ಸಾಹ ನೀಡುವುದು ಉಳಿದ ರಾಜ್ಯಗಳಿಗೆ ಮಲತಾಯಿ ಧೋರಣೆ ತೋರಿದೆ.
ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೂ ಕೂಡ ಈ ರಾಜ್ಯಕ್ಕೆ ಮುಖ್ಯಮಂತ್ರಿ ರಾಜ್ಯದಲ್ಲಿ ಹಲವಾರು ಯೋಜನೆಗಳ ಪ್ರಸ್ತಾವನೆಯನ್ನು ಸಲ್ಲಿಸಿದರು ಮೆಟ್ರೋ, ವರ್ತುಲ ರಸ್ತೆ, ರಾಷ್ಟ್ರೀಯ ಹೆದ್ದಾರಿಗಳು ಇವುಗಳಿಗೆ ಯಾವುದೇ ರೀತಿಯ ಸ್ಪಂದನೆ ಇಲ್ಲ. ಆದ್ದರಿಂದ ಈ ಬಜೆಟ್ ನೀರಸವಾಗಿದೆ ಮತ್ತು ರೈತರ ಪರವಾಗಿಲ್ಲ. ಇದು ಜನ-ವಿರೋಧಿ ಬಜೆಟ್ ಆಗಿದೆ.
– ಕೆ ಎಚ್ ಮುನಿಯಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ




