ಮೇಕೆದಾಟು ಯೋಜನೆಗೆ ಐದು ನಿಮಿಷದಲ್ಲಿ ಕೇಂದ್ರದ ಒಪ್ಪಿಗೆ ಕೊಡಿಸುತ್ತೇನೆ: ಎಚ್ ಡಿ ಕುಮಾರಸ್ವಾಮಿ

11 months ago

ಮಂಡ್ಯ: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಮೇಕೆದಾಟು ಯೋಜನೆಗೆ ಐದು ನಿಮಿಷದಲ್ಲಿ ಕೇಂದ್ರ ಸರ್ಕಾರದ ಒಪ್ಪಿಗೆ ಕೊಡಿಸುವುದಾಗಿ ಹೇಳಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಅದಕ್ಕೂ ಮೊದಲು ರಾಜ್ಯ ಸರ್ಕಾರ ಯೋಜನೆಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸಲಿ ಎಂದು ಸವಾಸೆದಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಈ ಯೋಜನೆಗಾಗಿ ತಮಿಳುನಾಡಿನ ಮಿತ್ರಪಕ್ಷ ಒಪ್ಪಿಸಲಿ. ಐದೇ ನಿಮಿಷದಲ್ಲಿ ಪ್ರಧಾನಮಂತ್ರಿಗಳಿಂದ ಮೇಕೆದಾಟು ಯೋಜನೆಗೆ ನಾನು ಒಪ್ಪಿಗೆ ಕೊಡಿಸುತ್ತೇನೆ ಎಂದರು.

ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಜಾರಿ ಮಾಡಲು ಕಚೇರಿ ತೆರೆದರೆ ಏನೂ ಪ್ರಯೋಜನವಿಲ್ಲ. ನನ್ನ ಹಳೆಯ ಮಾತಿಗೆ ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್ ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿಯಿಲ್ಲ. ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಲು ಸಾಧ್ಯವಿಲ್ಲ. ಇಲ್ಲದಿದ್ದರೆ ಇಂತಹ ಪರಿಸ್ಥಿತಿಯಲ್ಲಿ ಮೇಕೆದಾಟು ಯೋಜನೆ ಕಾಂಗ್ರೆಸ್ ನಿಂದ ಜಾರಿಯಾಗಲು ಸಾಧ್ಯವಿಲ್ಲ ಎಂದರು.

Leave a Reply