ಕೇಂದ್ರ ಸರ್ಕಾರದ ಅನ್ಯಾಯಗಳ ಸರಣಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 15ನೇ ಹಣಕಾಸು ಆಯೋಗದ ಅನುದಾನದ ಬಾಕಿಯೂ ಪ್ರಮುಖವಾದುದು. ಗ್ರಾಮಗಳ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿರುವ ಈ ಅನ್ಯಾಯದ ಬಗ್ಗೆ ಸಾಕಷ್ಟು ಬಾರಿ ಗಮನ ಸೆಳೆದರೂ ಕರ್ನಾಟಕದೆಡೆಗಿನ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮುಂದುವರೆದಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
2026ರ ಫೆಬ್ರವರಿಯಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುತ್ತಿದ್ದರೂ ₹2,186 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದಿರುವುದು ಗ್ರಾಮೀಣ ಕರ್ನಾಟಕಕ್ಕೆ ಎಸಗುತ್ತಿರುವ ಮಹಾದ್ರೋಹವೇ ಸರಿ.
ತಕ್ಷಣವೇ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪತ್ರ ಬರೆದಿದ್ದೇನೆ.
ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳು, ವಿಕಲಚೇತನರ ಕಲ್ಯಾಣ, ರಸ್ತೆ ಮುಂತಾದ ಕಾರ್ಯಕ್ರಮಗಳಿಗೆ ಬಳಕೆಯಾಗುವ ಈ ಅನುದಾನವನ್ನು ಬೇರೆಲ್ಲ ರಾಜ್ಯಗಳಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾತ್ರ ಮಲತಾಯಿ ಧೋರಣೆ ತೋರುತ್ತಿರುವುದೇಕೆ?
ರಾಜ್ಯದ BJP Karnataka ನಾಯಕರಿಗೆ ಕರ್ನಾಟಕದ ಬಗ್ಗೆ, ಕನ್ನಡಿಗರ ಬಗ್ಗೆ ಕಾಳಜಿ ಇದ್ದರೆ ಈ ಅನ್ಯಾಯದ ಕುರಿತು ನಮ್ಮೊಂದಿಗೆ ದನಿಗೂಡಿಸಲಿ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




