ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬರಬೇಕಾದ ಹಣವನ್ನು ಕೇಂದ್ರ ಸರ್ಕಾರ ಸಕಾಲದಲ್ಲಿ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಸಹಾಯವಾಗುತ್ತದೆ. ಆದರೆ ಕೇಂದ್ರ ಸರ್ಕಾರ ಈ ವಿಷಯದಲ್ಲಿ ತಾರತಮ್ಯ ನೀತಿ ತೋರಿಸುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಆರೋಪಿಸಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಎರಡು ವರ್ಷದಿಂದ ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದೇವೆ. ಅನೇಕ ಕಾರಣಗಳಿಂದ ನಿಧಾನವಾಗುತ್ತಿದೆ. ಕೆಲವು ಸಂದರ್ಭದಲ್ಲಿ ಬರುವುದಿಲ್ಲ ಎಂದರು.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತತ್‌ಕ್ಷಣಕ್ಕೆ 5,500 ಕೋಟಿ ರೂ. ನೀಡಬೇಕು. ಆದರೆ ಪ್ರತೀಬಾರಿ ಅನುದಾನ ನೀಡಿಕೆಯಲ್ಲಿ ವಿಳಂಬವಾಗುತ್ತಲೇ ಇದೆ. ಇದಕ್ಕಾಗಿ ನಿನ್ನೆ ಮುಖ್ಯಮಂತ್ರಿಗಳು ಸಂಸದರ ಜೊತೆ ಸಭೆ ನಡೆಸಿ ಗಮನಕ್ಕೆ ತಂದಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹಣ ಬಿಡುಗಡೆಗೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ ಎಂದರು.
ಕೆಲವು ಸಂಸದರು ಸಭೆಗೆ ಗೈರುಹಾಜರಾದ ಬಗ್ಗೆ ಹೆಚ್ಚು ಚರ್ಚೆ ಮಾಡಲು ಬಯಸುವುದಿಲ್ಲ. ಅವರಿಗೆ ಅವರದೇ ಆದ ಕಾರ್ಯ ಒತ್ತಡಗಳಿರುತ್ತವೆ. ಆದರೆ ರಾಜ್ಯದ ಪರವಾಗಿ ಎಲ್ಲರೂ ಧ್ವನಿಯೆತ್ತಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ಹಿಂದೆ ಅನುದಾನ ಸಿಗದೇ ಇದ್ದುದ್ದಕ್ಕಾಗಿ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಬೇಕಾಯಿತು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಒಳ್ಳೆಯ ಬಾಂಧವ್ಯ ಇರಬೇಕು. ಈ ಕಾರಣಕ್ಕಾಗಿ ನಿಯಮಾವಳಿಗಳಿವೆ. ಅದನ್ನು ಎರಡೂ ಕಡೆಯವರು ಅರ್ಥ ಮಾಡಿಕೊಳ್ಳಬೇಕು. ನಮಗೆ ಬರಬೇಕಾದಂತಹ ಅನುದಾನ ಕೊಟ್ಟರೆ ನಾವು ಒತ್ತಾಯ ಮಾಡುವುದಿಲ್ಲ. 2-3 ದಿನ ಹಿಂದೆಮುಂದೆಯಾದರೂ ಸಕಾಲಕ್ಕೆ ಹಣ ಬಿಡುಗಡೆಯಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನ್ಮದಿನದ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗಿದೆ. ಡಿಕೆಶಿಯವರಿಗೆ ಹುಟ್ಟುಹಬ್ಬದ ಶುಭಹಾರೈಸುತ್ತೇನೆ. ಗ್ರೇಟರ್ ಬೆಂಗಳೂರು ಅವರ ಕಲ್ಪನೆ. ಇಂದಿನಿಂದ ಅದು ಜಾರಿಗೆ ಬಂದಿದೆ. ಹೊಸರೂಪ ಯಶಸ್ವಿಯಾಗಲಿ, ಸಣ್ಣಪುಟ್ಟ ಲೋಪಗಳು, ನ್ಯೂನತೆಗಳಿದ್ದರೂ ಅದನ್ನು ಸರಿಪಡಿಸಿಕೊಳ್ಳಲಿ, ಅವಕಾಶವಿದೆ. ಫಲಿತಾಂಶಕ್ಕಾಗಿ ಕಾದು ನೋಡುತ್ತೇವೆ ಎಂದರು.
ವಿಶ್ವದ ದೊಡ್ಡ ನಗರಗಳಲ್ಲಿ ಈ ರೀತಿಯ ಪರಿಕಲ್ಪನೆಗಳಿವೆ. ಬೆಂಗಳೂರಿನ ವಿಸ್ತೀರ್ಣತೆ ದೊಡ್ಡದಿದ್ದು, ಒಬ್ಬ ಅಧಿಕಾರಿ ಅದನ್ನು ನಿಭಾಯಿಸುವುದು ಕಷ್ಟ. ಅದಕ್ಕಾಗಿ ಅಧಿಕಾರದ ವಿಕೇಂದ್ರೀಕರಣವಾಗಿದೆ ಎಂದರು.



