ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆ ಕುರಿತಾಗಿ ರಚನೆಯಾಗಿರುವ ನ್ಯಾಯಮಂಡಳಿ ನೀಡಿರುವ ಅಂತಿಮ ತೀರ್ಪನ್ನು ಅಧಿಸೂಚನೆ ಮೂಲಕ ಪ್ರಕಟಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಈ ಕುರಿತು ಎಲ್ಲಾ ರಾಜ್ಯಗಳ ನಡುವೆ ಒಮ್ಮತ ಮೂಡಿಸಲು ಸಭೆ ಕರೆಯಲು ತೀರ್ಮಾನಿಸಿದೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಸದ್ಯದಲ್ಲಿಯೇ ಈ ಕುರಿತಂತೆ ಸಭೆಗೆ ದಿನಾಂಕ ನಿಗದಿಪಡಿಸಿ ಮಾಹಿತಿ ನೀಡಲಾಗುವುದು. ಸಭೆಗೆ ತಪ್ಪದೆ ಹಾಜರಾಗುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರು ತಮಗೆ ಮನವಿ ಮಾಡಿದ್ದಾರೆ. ಅದರಂತೆ ತಾವು ಅವರು ಸೂಚಿಸಿದ ದಿನ ಸಭೆಗೆ ಹಾಜರಾಗುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿಗಳು, ನಾಲೆಗಳ ಆಧುನಿಕರಣ, ನಿರ್ಮಾಣ ಮತ್ತು ಭೂಸ್ವಾಧೀನ ಪ್ರಕ್ರಿಯೆಗಳ ಕುರಿತಂತೆ ಚರ್ಚೆ ನಡೆಸಲು ಜಲಾನಯನ ಪ್ರದೇಶ ವ್ಯಾಪ್ತಿಯ ಎಲ್ಲಾ ಶಾಸಕರು, ರೈತ ಮುಖಂಡರು ಮತ್ತು ಮಂತ್ರಿಗಳೊಂದಿಗೆ ಸಭೆ ನಡೆಸಿದರು.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಗಾರಿಗಳ ಆರಂಭಕ್ಕೆ ಬೇಕಾಗಿರುವ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ನೀಡಬೇಕಾಗಿರುವ ಪರಿಹಾರ ಮೊತ್ತದ ಕುರಿತು ತಕರಾರೋ ಉಂಟಾಗಿದೆ ಇದನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದರು.
ಬೆಳಗಾವಿಯಲ್ಲಿಯೇ ಈ ಸಂಬಂಧ ರೈತ ಮುಖಂಡರೊಂದಿಗೆ ಚರ್ಚೆ ನಡೆಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಈಗ ಜಲಾನಯನ ಪ್ರದೇಶದ ಎಲ್ಲಾ ಪಕ್ಷಗಳ ಶಾಸಕರು, ಮಂತ್ರಿಗಳು ಮತ್ತು ರೈತರೊಂದಿಗೆ ಸಭೆ ನಡೆಸಿ ಒಮ್ಮತ ಮೂಡಿಸುವ ಪ್ರಯತ್ನ ಮಾಡಲಾಗಿದೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಈ ಹಿಂದೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 24 ಲಕ್ಷ ಒಣ ಬೇಸಾಯದ ಜಮೀನಿಗೆ 20 ಲಕ್ಷ ಪರಿಹಾರ ನೀಡಲು ತೀರ್ಮಾನಿಸಿತ್ತು. ಆದರೆ ರೈತರು ಈ ಪರಿಹಾರದ ಮೊತ್ತ ಪಡೆಯಲು ನಿರಾಕರಿಸಿ ಪ್ರತಿಭಟನೆ ಆರಂಭಿಸಿದ್ದರು ಪ್ರತಿಭಟನೆ ನಿರತ ರೈತರೊಂದಿಗೆ ಸಚಿವ ಆರ್. ಬಿ. ತಿಮ್ಮಾಪುರ ಅವರು ಮಾತುಕತೆ ನಡೆಸಿ ಪ್ರತಿಭಟನೆ ಕೈಬಿಡಲು ಮನವೊಲಿಸಿದ್ದರು. ಅದಾದ ಬಳಿಕ ಸರ್ಕಾರ ಇವರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದರು.
ಯೋಜನೆ ಪೂರ್ಣಗೊಳಿಸಲು ಹಾಕಿಕೊಂಡಿದ್ದ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಈಗಾಗಲೇ ಸಾಕಷ್ಟು ಸಮಯ ವ್ಯರ್ಥವಾಗಿದೆ. ಯೋಜನಾ ವೆಚ್ಚವೂ ಅಧಿಕಗೊಂಡಿದೆ. ಎಲ್ಲವನ್ನು ರೈತರ ಗಮನಕ್ಕೆ ತಂದಿದ್ದೇವೆ. ರೈತರ ಹಿತದೃಷ್ಟಿಯಿಂದ ಈ ವಿಚಾರದಲ್ಲಿ ಸಮನ್ವಯತೆ ಸಾಧಿಸಿ ಒಪ್ಪಿಗೆಯೊಂದಿಗೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುವುದು. ಆನಂತರ ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.




