ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟಗೊಂಡಿವೆ.
- AHO, ADH ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡಿ: ಆರ್ ಅಶೋಕ್
- ಕೃಷ್ಣ ಬೈರೇಗೌಡ ಅವರಿಗೆ ಪ್ರಕಾಶ್ ಕೋನಾಪುರ ಬರೆದ ಪತ್ರ
- ಆಹಾರ, ಔಷಧ ಕ್ಷೇತ್ರದ ಯಾವುದೇ ಅಕ್ರಮ ಜಾಲವನ್ನು ಸರ್ಕಾರ ಸಹಿಸದು: ಯು.ಟಿ.ಖಾದರ್
- ಜಯಚಾಮರಾಜೇಂದ್ರ ಒಡೆಯರ್ ಕೃತಿಗಳಿಗೆ ಭರತನಾಟ್ಯ ಪ್ರಯೋಗ
- ಕಿದ್ವಾಯಿ ಕ್ಯಾನ್ಸರ್ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆ ಆರಂಭಿಸುವಂತೆ ಒತ್ತಾಯ
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೆಇಎ, ‘UGCET-25 ಸಂಬಂಧಿಸಿದಂತೆ ಎಲ್ಲ ನಾಲ್ಕು ವಿಷಯಗಳ 16 ಆವೃತ್ತಿಗಳ (ವರ್ಷನ್) ಕೀ ಉತ್ತರಗಳನ್ನು ಕೆಇಎ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದಿದೆ. ಆಕ್ಷೇಪಣೆಗಳು ಇದ್ದಲ್ಲಿ ಏ.22ರೊಳಗೆ ಆನ್‌ಲೈನ್ ಮೂಲಕ ಸಲ್ಲಿಸಬಹುದು ಎಂದು ತಿಳಿಸಿದೆ.
ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಏ.16 ಮತ್ತು 17ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ಆವೃತ್ತಿಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ ಎಂದಿದೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ಏ.22ರ ಸಂಜೆ 5:00ರೊಳಗೆ ಸಲ್ಲಿಸಬಹುದು.




