ದಾವಣಗೆರೆ: ಚುನಾವಣಾ ಮತಗಟ್ಟೆ ಮಟ್ಟದ ಅಧಿಕಾರಿ ಸಿಬ್ಬಂದಿಗೆ ಏಪ್ರಿಲ್ 8 ರಂದು ಚನ್ನಗಿರಿಯಲ್ಲಿ ಏರ್ಪಡಿಸಿದ ತರಬೇತಿ ಕಾರ್ಯಾಗಾರದಲ್ಲಿ ಬೆಳಿಗ್ಗೆ ಹಾಜರಾಗಿ ಮಧ್ಯಾಹ್ನ ತರಬೇತಿಗೆ ಹಾಜರಾಗದೆ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ಹೊರ ಹೋಗಿದ್ದು ಇದನ್ನು ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಅನುಚಿತ ವರ್ತನೆ ಮಾಡಿದ ಚನ್ನಗಿರಿ ಎಸ್.ಕೆ.ಎಂ.ಎಸ್ ಮಿಲ್ಲತ್ ಪ್ರೌಢಶಾಲೆ ಸಹ ಶಿಕ್ಷಕ ಸೈಯದ್ ಸುಲ್ತಾನ್ ಅಹಮದ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ದಾವಣಗೆರೆ ಲೋಕಸಭಾ ಕ್ಷೇತ್ರದ ಮತಗಟ್ಟೆ ಅಧ್ಯಕ್ಷ, ಸಹಾಯಕ ಅಧ್ಯಕ್ಷಾಧಿಕಾರಿ ಸಿಬ್ಬಂದಿಗೆ ಏಪ್ರಿಲ್ 8 ರಂದು ಮೊದಲ ಹಂತದ ತರಬೇತಿಯನ್ನು ಎಲ್ಲಾ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿಯಲ್ಲಿ ಶ್ರೀಶ್ರೀಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಬೇತಿ ನಡೆದಿತ್ತು. ಬೆಳಿಗ್ಗೆ ತರಬೇತಿ ಮುಗಿದು ಮಧ್ಯಾಹ್ನ 3 ಗಂಟೆಗೆ ಕೊಠಡಿ ಸಂಖ್ಯೆ 10ರಲ್ಲಿ ತರಬೇತಿ ಆರಂಭವಾಗಿತ್ತು. ಆದರೆ ಯಾವುದೇ ಅನುಮತಿ ಇಲ್ಲದೆ ತರಬೇತಿಗೆ ಹಾಜರಾದ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ತರಬೇತಿಯಿಂದ ಹೊರ ಹೋಗುತ್ತಿರುವಾಗ ಇದನ್ನು ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿಯೇ ಅಸಭ್ಯವಾಗಿ ವರ್ತಿಸಿದ್ದಾರೆ. ಜೊತೆಗೆ ಅನ್ಯ ಸಿಬ್ಬಂದಿಯನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದು ಚುನಾವಣಾ ಪ್ರಾಧಿಕಾರಕ್ಕೆ ಮುಜುಗರ ಉಂಟು ಮಾಡಿರುತ್ತಾರೆ.
ಇದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134 ರ ನಿಯಮ ಉಲ್ಲಂಘನೆ ಮತ್ತು ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮಾವಳಿ 1966 ಹಾಗೂ ತಿದ್ದುಪಡಿ ನಿಯಮಗಳು 2021 ರ ನಿಯಮ ಉಲ್ಲಂಘಿಸಿ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅಮಾನತು ಮಾಡಿ ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದೆ.



