ಬೆಂಗಳೂರು: ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ನಡೆದ ಚರ್ಚೆಯ ಪ್ರಮುಖ ಅಂಶಗಳು:
1. ಭಾನುವಾರದಿಂದ ಬಿಜಾಪುರ, ಬಾಗಲಕೋಟೆ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
2. ಸೋಮವಾರದಿಂದ ಬೀದರ್, ಗುಲಬುರ್ಗಾ, ರಾಯಚೂರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ.
3. ಮುಂದಿನ ವಾರ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮೀಣ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ
4. ಆಗಸ್ಟ್ 25ರ ನಂತರ ಬೆಳಗಾವಿ ಸೇರಿದಂತೆ ಮಲೆನಾಡಿನಿಂದ ಕೊಡಗಿನ ವರೆಗೆ ವ್ಯಾಪಕ ಮಳೆಯಾಗಲಿದೆ, ಸರಾಸರಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
5. ಯಾವ ಜಿಲ್ಲೆಗೆ ಯಾವ ಸಮಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂಬ ವಿವರಗಳನ್ನು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಕಳುಹಿಸಲಾಗಿದೆ.
6. ಜಿಲ್ಲಾಧಿಕಾರಿಗಳು ಹವಾಮಾನ ಇಲಾಖೆ ವರದಿಯ ಅನ್ವಯ ತಮ್ಮ ಜಿಲ್ಲೆಗಳಲ್ಲಿ ಮಳೆಯ ಕಾರಣದಿಂದಾಗಿ ಯಾವ ಅನಾಹುತಗಳೂ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.
7. ಮಲೆನಾಡು ಕರಾವಳಿ ಸೇರಿದಂತೆ ಗುಡ್ಡಗಾಡು ಪ್ರದೇಶಗಳಲ್ಲಿ ಮನೆ ನಿರ್ಮಿಸಿಕೊಂಡಿರುವ ಪ್ರದೇಶಗಳಿಗೆ ಖುದ್ದು ಭೇಟಿ ನೀಡಬೇಕು. ಮನೆಗಳು ಕುಸಿಯುವ ಸಾಧ್ಯತೆ ಇದ್ದರೆ ಅಂತಹ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ರವಾನಿಸಬೇಕು.
8. ಎಲ್ಲೆಲ್ಲಿ ಭೂ ಕುಸಿತ ಉಂಟಾಗಬಹುದಾದ ಸಾಧ್ಯತೆ ಇದೆ ಎಂಬ ಮಾಹಿತಿಯನ್ನೂ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗಿದೆ. ಹೀಗಾಗಿ ಆ ಭಾಗದಲ್ಲಿನ ಜನರನ್ನೂ ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು.
9. ಅಣೆಕಟ್ಟೆಗಳಿಂದ ನೀರು ಬಿಡುವ ಮುನ್ನ ನದಿಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಬೇಕು. ಅಗತ್ಯವಿದ್ದರೆ ಅವರನ್ನೂ ಕಾಳಜಿ ಕೇಂದ್ರಕ್ಕೆ ರವಾನಿಸಬೇಕು.
10. ಅಣೆಕಟ್ಟೆಗಳು ಶೇ.100 ರಷ್ಟು ಭರ್ತಿಯಾದ ನಂತರ ನೀರು ಬಿಡುಗಡೆ ಮಾಡಿದರೆ ಮಳೆ ನೀರಿನ ಜೊತೆ ಈ ನೀರೂ ಸೇರಿ ಅನಗತ್ಯ ನೆರೆ ಉಂಟಾಗುತ್ತದೆ. ಹೀಗಾಗಿ ಕೆರೆಗಳನ್ನು ತುಂಬಿಸುವಂತೆ ಹಾಗೂ ಮಳೆ ಮುನ್ಸೂಚನೆ ಆಧರಿಸಿ, ಮುಂಚಿತವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಗಳಿಂದ ಹೊರಗೆ ಬಿಡುವ ಮೂಲಕ, ಮಳೆಯಾದಾಗ ಜಲಾಶಯಗಳಲ್ಲಿ ಏಕಾಏಕಿ ನೀರಿನ ಸಂಗ್ರಹ ಹೆಚ್ಚಾಗಿ ಪ್ರವಾಹ ಉಂಟಾಗುವುದನ್ನು ತಡೆಗಟ್ಟಲು ಸೂಚಿಸಿದರು.
11. ಕುಡಿಯುವ ನೀರಿನ ಶೇಖರಣೆ ಇರುವ ಜಾಗಗಳಲ್ಲಿ ಮಳೆ ನೀರು ಅಥವಾ ಕೊಳಚೆ ನೀರು ಮಿಶ್ರಣವಾಗದಂತೆ ಎಚ್ಚರವಹಿಸಬೇಕು.
12. ಮಳೆಯಿಂದಾಗಿ ರಾಜ್ಯಾದ್ಯಂತ 81589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಮುಂದಿನ ವಾರದೊಳಗೆ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು. ಪರಿಹಾರವನ್ನು ಡಿಬಿಟಿ ಮೂಲಕ ನೀಡಲು ಸೂಚನೆ.
13. ಒಟ್ಟು 1283 ಮನೆಗಳು ಶೇ. 75 ಕ್ಕಿಂತ ಹೆಚ್ಚು ಹಾನಿಗೊಳಗಾಗಿದೆ. ಅದರಲ್ಲಿ 879 ಪ್ರಕರಣಗಳಲ್ಲಿ ತಲಾ 1.2೦ ಲಕ್ಷ ರೂ. ನಂತೆ 10.54 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇದರೊಂದಿಗೆ ದೇವರಾಜ ಅರಸು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಲಾಗುವುದು. ಈಗಾಗಲೇ 500 ಮನೆ ಮಂಜೂರು ಮಾಡಲಾಗಿದೆ. ಉಳಿದ ಫಲಾನುಭವಿಗಳಿಗೂ ಶೀಘ್ರ ಪರಿಹಾರ ನೀಡಲು ಖಡಕ್ ಸೂಚನೆ ನೀಡಲಾಯಿತು.
14. ಸೇತುವೆಗಳ ಫಿಟ್‌ನೆಸ್‌ಗಳ ಬಗ್ಗೆ ವರದಿಯನ್ನು ಲೋಕೋಪಯೋಗಿ ಇಲಾಖೆಯಿಂದ ಪಡೆಯಬೇಕು. ಸಂಪರ್ಕ ರಸ್ತೆಗಳು ಕುಸಿದಿದ್ದರೆ ಅವುಗಳನ್ನು ಸರಿಪಡಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಬೇಕು. ಎಲ್ಲಾ ಸೇತುವೆ, ರಸ್ತೆಗಳನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಬೇಕು.
15. ಮುಳುಗು ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು. ಯಾವುದೇ ಕಾರಣಕ್ಕೂ ವಾಹನ ಸಂಚರಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.
16. ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 67 ಸಾವು ಸಂಭವಿಸಿದ್ದು, 66 ಪ್ರಕರಣಗಳಲ್ಲಿ 329 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಮಳೆಯಿಂದಾಗಿ ಯಾರೇ ಮೃತಪಟ್ಟರೂ ಕೂಡಲೇ ಪರಿಹಾರ ನೀಡಲು ಸೂಚನೆ.
17. ಅಂಗನವಾಡಿ , ಶಾಲೆ ಕಟ್ಟಡಗಳ, ಸೇತುವೆಗಳು, ಕರೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸೂಚಿಸಲಾಗಿದೆ.
18. ಮಲೆನಾಡು, ಕರಾವಳಿ ಭಾಗಗಳಲ್ಲಿ ಇರುವ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿ, ಕ್ರಿಯಾ ಯೋಜನೆಯಲ್ಲಿ ಆದ್ಯತೆ ಮೇರೆಗೆ ದುರಸ್ತಿ ಪಡಿಸಬೇಕು.
19. ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಸಲಾಗಿದೆ. 20 ಸಾವಿರ ರೂ. ಅನುದಾನ ಒದಗಿಸಲಾಗಿದೆ. ಸಾವು ನೋವು ತಪ್ಪಿಸುವುದು ನಮ್ಮ ಆದ್ಯತೆ. ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಬಲಪಡಿಸಲು ಕ್ರಮ ಕೈಗೊಳ್ಳಬೇಕು.
20. ಮನೆ ಕುಸಿತ, ನೀರಿನಲ್ಲಿ ಕೊಚ್ಚಿ ಹೋಗುವಂತಹ ಪ್ರಕರಣಗಳಲ್ಲಿ ಸಾವು ನೋವು ತಪ್ಪಿಸಲು ಸಾಧ್ಯವಿದೆ. ಶಿಥಿಲವಾದ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮಮಟ್ಟದಲ್ಲಿ ಮೊದಲೇ ಗುರುತಿಸಬೇಕು.
21. 2817 ಕುಟುಂಬಗಳಿಗೆ ಬಟ್ಟೆ ಬರೆ ಹಾನಿಗಾಗಿ 2500 ರೂ. ನಂತೆ ಹಾಗೂ 2811 ಕುಟುಂಬಗಳಿಗೆ ಗೃಹೋಪಯೋಗಿ ಸಾಮಗ್ರಿಗಳ ಹಾನಿಗೆ ತಲಾ 2500 ರಂತೆ ಒಟ್ಟು 1.40 ಕೋಟಿ ರೂ. ಪರಿಹಾರ ವಿತರಿಸಲಾಗಿದೆ.
22. ರಾಜ್ಯದಲ್ಲಿ ಮನೆ ಕುಸಿದು 29 ಸಾವು ಸಂಭವಿಸಿದ್ದು, ನಗರ ಮತ್ತು ಗ್ರಾಮ ಪ್ರದೇಶಗಳಲ್ಲಿ ಶಿಥಿಲಗೊಂಡ ಮನೆಗಳಲ್ಲಿರುವವರನ್ನು ಖಾಲಿ ಮಾಡಿ ಅವರಿಗೆ ಪುನರ್ವಸತಿ ಕಲ್ಪಿಸಬೇಕು.
23. ಪ್ರವಾಹ ಇರುವಾಗ ನೀರಿಗೆ ಇಳಿಯಲು ಬಿಡಬಾರದು, ಪೊಲೀಸರ ಸಹಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತ್, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಮುಂಜಾಗರೂಕತೆ ಕ್ರಮಗಳನ್ನು ಕೈಗೊಳ್ಳಬೇಕು.
24. ಬೆಂಗಳೂರು ನಗರದಲ್ಲಿ ಕಂಟ್ರೋಲ್ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ.
25. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಇರಲು ಸೂಚಿಸಬೇಕು.
26. ನಗರ ಮತ್ತು ಪಟ್ಟಣಗಳಲ್ಲಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಚರಂಡಿಗಳ ಸ್ವಚ್ಚತೆಯನ್ನು ನಿರಂತರವಾಗಿ ಮಾಡಬೇಕು. 210ಕೋಟಿ ರೂ. ರಾಜ್ಯ ಹೆದ್ದಾರಿಗಳ ದುರಸ್ತಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ.
27. ಪ್ರವಾಹ ಸಂದರ್ಭದಲ್ಲಿ ಉದ್ಭವವಾಗಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಡೆಂಗ್ಯು ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಚಿಕುನ್‌ಗುನ್ಯಾ, ಮಲೇರಿಯಾ ರೋಗ ಹರಡದಂತೆ ಕೂಡ ಎಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು.
28. ಪ್ರವಾಹ, ಭಾರಿ ಮಳೆ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡರೆ, ಕೂಡಲೇ ಸರಿಪಡಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಯಿತು. ಅಗತ್ಯವಿರುವ ಟ್ರಾನ್ಸ್‌ಫಾರ್ಮರ್‌ಗಳು, ಕಂಬಗಳನ್ನು ಲಭ್ಯಗೊಳಿಸಲು ಸೂಚಿಸಲಾಯಿತು.
29. ಒಟ್ಟಾರೆಯಾಗಿ ಎಲ್ಲ ಇಲಾಖೆಗಳೂ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.




