ಬೆಂಗಳೂರು: ವಾತಾವರಣದಲ್ಲಾಗುತ್ತಿರುವ ಬದಲಾವಣೆ ಹಾಗೂ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವೆಡೆ ಹಿಂಗಾರು ಮಳೆ ಅಬ್ಬರಿಸುತ್ತಿದೆ. ಇದರಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಅನಾಹುತ ಸಂಭವಿಸಿದೆ. ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರ ಜೊತೆಗೆ ಮತ್ತೊಂದು ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ ಅ.26ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯುವ ಲಕ್ಷಣಗಳಿವೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಕಳೆದ ಮೂರು-ನಾಲ್ಕು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಕಲ್ಯಾಣ ಕರ್ನಾಟಕ ಹೊರತುಪಡಿಸಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆಯಾಗಿದೆ. ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ನಿನ್ನೆ ಸಂಜೆ ಹಾಗೂ ರಾತ್ರಿ ಮಳೆಯಾಗಿದೆ. ಬೆಂಗಳೂರು ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.
ಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿ ನಿರ್ಮಾಣಗೊಂಡಿರುವ ಶ್ರೀವಾರಿ ಅಪಾರ್ಟ್‌ಮೆಂಟ್‌ನ ಕಾಂಪೌಂಡ್ ಕುಸಿದಿದೆ. ರಾಮಸಂದ್ರ ಹಾಗೂ ಹಿರೇಕೆರೆ ಕೋಡಿ ಬಿದ್ದ ಪರಿಣಾಮ ಕೆಂಗೇರಿ ಸಮೀಪದ ಕೆಂಪೇಗೌಡ ಬಡಾವಣೆಯ ಮೂರು ಮತ್ತು ನಾಲ್ಕನೇ ಹಂತದ ಪ್ರದೇಶಗಳು ಜಲಾವೃತವಾಗಿವೆ.
ವಿಪಕ್ಷ ನಾಯಕರಾದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಡಾ. ಸಿ ಎನ್ ಅಶ್ವತ್ಥ್ ನಾರಾಯಣ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಹಲವರು ಬೆಂಗಳೂರಿನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




