ಬೆಳಗಾವಿ: ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸ್ವಾಗತಿಸಿದ ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಸೋದರ ಚನ್ನರಾಜ ಹಟ್ಟಿ ಹೊಳಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಈಗ ಗಮನ ಸೆಳೆಯುತ್ತಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತೆಲಂಗಾಣ ಸರ್ಕಾರ ಹೈದರಾಬಾದ್ ನಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಡಿ ಕೆ ಶಿವಕುಮಾರ್ ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನಿಂದ ಇಂದು ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯ ಇತರೆ ಕಾಂಗ್ರೆಸ್ ಶಾಸಕರೊಂದಿಗೆ ಸ್ವಾಗತಿಸಿದರು.
ಈ ಫೋಟೋ ಅನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಾಕಿಕೊಂಡಿರುವ ಚನ್ನರಾಜ ಹಟ್ಟಿಹೊಳಿ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು ಎಂದು ಅದರಲ್ಲಿ ಹೇಳಿಕೊಂಡಿದ್ದಾರೆ. ಈ ಪೋಸ್ಟ್ ಇದೀಗ ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿದೆ.
ಚನ್ನರಾಜ ನೀಡಿದ ಸ್ಪಷ್ಟನೆ ಏನು?: ಸಾಕಷ್ಟು ಚರ್ಚೆಯ ನಂತರ ಇದಕ್ಕೆ ಸ್ಪಷ್ಟನೆ ನೀಡಿರುವ ಚನ್ನರಾಜ ಹಟ್ಟಿಹೊಳಿ, ಈ ಪೋಸ್ಟ್ ಯಾವುದೇ ಉದ್ದೇಶದಿಂದ ಹಾಕಿರುವುದಿಲ್ಲ. ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡ್ಲರ್ ಮಾಡಿದ ಕಾಗುಣಿತದ ದೋಷದಿಂದಾಗಿ ಗೊಂದಲ ಉಂಟಾಗಿದೆ ಇದನ್ನು ಈಗಾಗಲೇ ಸರಿಪಡಿಸಲಾಗಿದೆ ಎಂದಿದ್ದಾರೆ.




