3.98 ಕೋಟಿ ರೂ. ಮೌಲ್ಯದ ಆಸ್ತಿಗಳ ಮುಟ್ಟುಗೋಲು
ಏಪ್ರಿಲ್ 24-25 ರಂದು ಕರ್ನಾಟಕದ 14 ಸ್ಥಳಗಳಲ್ಲಿ ಇಡಿ ಶೋಧ
ಐಶ್ವರ್ಯ ಗೌಡ ವಿರುದ್ಧ ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ದಾಳಿ ನಡೆಸಿದ್ದ ಇಡಿ
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿ 18 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯಕ್ಕೆ ಜೂನ್ 21 ರಂದು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಪ್ರಕರಣದಲ್ಲಿ ಇತ್ತೀಚೆಗೆ ಇ.ಡಿ. 3.98 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ, ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಇಡಿ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24-25 ರಂದು ಕರ್ನಾಟಕದ 14 ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು. ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲ(ಇಡಿ)ಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್ ನಲ್ಲೇ ಡಿ ಕೆ ಸುರೇಶ್ ದೂರು ನೀಡಿದ್ದರು.




