ಬೆಂಗಳೂರು: ಶಾಸಕ ಸತೀಶ್ ಸೈಲ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೈಲ್ ಹಾಗೂ ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಗರದ ಪಿಎಂಎಲ್‌ಎ ವಿಶೇಷ ಕೋರ್ಟ್‌ಗೆ ಆರೋಪಪಟ್ಟಿ( ಚಾರ್ಜಶೀಟ್ )ಸಲ್ಲಿಸಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಕಬ್ಬಿಣದ ಅದಿರು ಅಕ್ರಮ ರಫ್ತನಿಂದ ಸರ್ಕಾರದ ಖಜಾನೆಗೆ ಸುಮಾರು 44.09 ಕೋಟಿ ರೂಗಳಷ್ಟು ನಷ್ಟವಾಗಿದೆ ಎಂದು ಚಾರ್ಜಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಸುಮಾರು 44 ಕೋಟಿ ಮೌಲ್ಯದ ಕಬ್ಬಿಣದ ಅದಿರು ಅಕ್ರಮ ರಫ್ತು ಸಂಬಂಧ 2010ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದ ಬಳಿಕ ಇಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು.
ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸುಮಾರು 8 ಲಕ್ಷ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ನಲ್ಲಿ ಇ.ಡಿ.ಅಧಿಕಾರಿಗಳು ಸತೀಶ್ ಸೈಲ್ ಅವರನ್ನು ಬಂಧಿಸಿದ್ದರು. ಸತೀಶ್ ಸೈಲ್ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕರಾಗಿದ್ದು, ಈ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ.ಲಿ ಕಂಪನಿಗೆ 27 ಕೋಟಿ ರೂಪಾಯಿ ಲಾಭವಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ಅಲ್ಲದೇ ಸೈಲ್ ಬ್ಯಾಂಕ್ ವಿವರಗಳನ್ನೂ ಇ.ಡಿ ಪ್ರಸ್ತಾಪಿಸಿದ್ದು, ಸೈಲ್ ವಿದೇಶದಲ್ಲಿ ಬ್ಯಾಂಕ್ ಅಕೌಂಟ್ ಹೊಂದಿದ್ದಾರೆ. ಹಾಂಕಾಂಗ್ ಸ್ಟಾಂಡರ್ಡ್ ಚಾರ್ಟಡ್್ರ ಬ್ಯಾಂಕ್, ಐಸಿಬಿಸಿ ಬ್ಯಾಂಕ್ ಹಾಂಕಾಂಗ್‌ನಲ್ಲಿ ಸತೀಶ್ ಸೈಲ್ ಖಾತೆಗಳನ್ನು ಹೊಂದಿದ್ದಾರೆ. ನೈಜ ಚೀನಾ ಖರೀದಿದಾರರಿಗೆ ರಫ್ತು ಮಾಡದೇ, ಮಧ್ಯದಲ್ಲಿ ವಿದೇಶಿ ಕಂಪನಿ ಮೂಲಕ ಅಪರಾಧ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ: 2010ರಲ್ಲಿ ಬೇಲೇಕೇರಿ ಬಂದರಿನಲ್ಲಿ ನಡೆದಿದ್ದ ಕಬ್ಬಿಣದ ಅದಿರು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ನಡೆದಿತ್ತು. ಈ ಪ್ರಕರಣದಲ್ಲಿ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿತ್ತು.
ಪ್ರಕರಣದಲ್ಲಿ ಇಡಿ ತನಿಖೆ ಆರಂಭಿಸಿತ್ತು. ಆಗಸ್ಟ್ 13 ಮತ್ತು 14ರಂದು ಇ.ಡಿ. ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರ ಮನೆ, ಕಚೇರಿ, ದೆಹಲಿ ಹಾಗೂ ಗೋವಾ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು.




