ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಗನ್, ಗಾಂಜಾ ಮತ್ತು ಬುಲೆಟ್ ಪೂರೈಕೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಾರಾಗೃಹಗಳಲ್ಲಿ ಗನ್, ಗಾಂಜಾ ಮತ್ತು ಬುಲೆಟ್ ಪೂರೈಕೆಯಾಗುತ್ತಿದೆ ಮತ್ತು ಹಣ ವಸೂಲಿಗೆ ಜೈಲು ಅಧಿಕಾರಿಗಳೇ ಕೈದಿಗಳಿಗೆ ಸುಪಾರಿ ನೀಡುತ್ತಿದ್ದಾರೆ ಎಂದು ವಕೀಲರೊಬ್ಬರು ಹೈಕೋರ್ಟ್ ಪೀಠದ ಮುಂದೆ ಮಾಡಿದ ಗಂಭೀರ ಆರೋಪವನ್ನು ಅಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅಚ್ಚರಿ ವ್ಯಕ್ತಪಡಿಸಿದರು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚಿಸಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬರಿಗೆ ಮನೆ ಊಟ ಪೂರೈಸಲು ಅನುಮತಿ ನೀಡುವಂತೆ ಜೈಲು ಅಧೀಕ್ಷಕರಿಗೆ ನಿರ್ದೇಶನ ನೀಡಬೇಕು ಎಂದು ಕೈದಿಯ ಸಂಬಂಧಿಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ವೇಳೆ ಜೈಲಿನಲ್ಲಿ ಕೈದಿಗಳಿಗೆ ಮನೆ ಊಟ ಸರಬರಾಜು ಮಾಡಲು ಅನುಮತಿ ಇಲ್ಲ. ಆದರೆ ನಿಷೇಧಿತ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನಿಷೇಧಿತ ವಸ್ತುಗಳು ಅಂದರೆ ಯಾವುವು? ಎಂದು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಕೈದಿಯೊಬ್ಬರ ಪತ್ನಿ ಜೈಲುಗಳಲ್ಲಿ ಮೊಬೈಲ್, ಗಾಂಜಾ, ಗನ್ ಮತ್ತು ಬುಲೆಟ್ ಅನ್ನು ಜೈಲಿನ ಒಳಗಡೆಗೆ ಜೈಲು ಅಧಿಕಾರಿಗಳೇ ಪೂರೈಸುತ್ತಿದ್ದಾರೆ ಎಂದು ಕಾರಾಗೃಹ ಡಿಜಿಪಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ ಎಂದರು.
ಇದಕ್ಕೆ ಆಘಾತ ವ್ಯಕ್ತಪಡಿಸಿದ ನ್ಯಾಯಪೀಠ ವರದಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.




