ಬೆಂಗಳೂರು: ಮುಂದಿನ ಒಂದು ತಿಂಗಳೊಳಗಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್ ಸೆಂಟರ್ ಗಳು ಕಾರ್ಯಾರಂಭ ಮಾಡಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಈ ಮೂಲಕ ಕ್ಯಾನ್ಸರ್ ಪೀಡಿತರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲು ತೀರ್ಮಾನಿಸಿದಂತಾಗಿದೆ.
ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಬಳಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ ಎಂದರು.
ಡಯಾಲಿಸಿಸ್ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, 750ಕ್ಕೂ ಹೆಚ್ಚು ಏಕಬಳಕೆಯ ಡಯಾಲಿಸಿಸ್ ಹೊಸ ಯಂತ್ರಗಳನ್ನ ಅಳವಡಿಸಿದ್ದೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಈ ಹಿಂದೆ ಶೇ 30 ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿಗಳು ಸರಬರಾಜು ಆಗುತ್ತಿದ್ದವು. ಇದೀಗ ಶೇ 70 ರಷ್ಟು ಔಷಧಿಗಳನ್ನ ನಿಗಮದಿಂದ ಖರೀಧಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ. ಮುಂಬರವ ಕೆಲವೇ ದಿನಗಳಲ್ಲಿ ಶೇ 90 ರಷ್ಟು ಔಷಧಿಗಳು ದೊರಕಿಸುವತ್ತ ಆರೋಗ್ಯ ಇಲಾಖೆ ಹೆಜ್ಜೆಯಿಟ್ಟಿದೆ ಎಂದರು.
ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ದೂರದ ನಗರಪ್ರದೇಶದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ. ಜನರಿಗೆ ಅವರ ಜಿಲ್ಲೆಗಳಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳನ್ನ ತೆರೆಯಲಾಗುವುದು. ಮುಂಬರುವ ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದರು.
ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆಗಾಗಿ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆ ಆರಂಭಿಸಲಾಗುವುದು. ಇದಕ್ಕಾಗಿ 65 ನೂತನ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆಯನ್ನ ಒದಗಿಸಲಾಗುತ್ತದೆ ಎಂದರು
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆರೋಗ್ಯ ಸೇವೆಗಳನ್ನ ನೀಡುವಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳು ಹಿಂದೆಬೀಳಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಉತ್ತಮ ವೈದ್ಯರುಗಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿರುವ ವೈದ್ಯರಿಗೆ ಹೊಲಿಸಿದರೆ ಹೆಚ್ಚು ಅನುಭವ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹೊಂದಿದ್ದಾರೆ ಎಂದರು.
ಹೈಟೆಕ್ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುವಂತಾಗಬೇಕು. ಆಧುನಿಕ ಯುಗದಲ್ಲಿ ರೋಬೊಟಿಕ್ ಸರ್ಜರಿಗಳನ್ನ ನಡೆಸಲಾಗುತ್ತಿದೆ. ರೋಬೊಟಿಕ್ ಸರ್ಜರಿಯಂತಹ ಆರೋಗ್ಯ ಸೇವೆಗಳನ್ನು ಸರ್ಕಾರಿ ಆಸ್ಪತ್ರೆಯಲ್ಲೂ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಆರೋಗ್ಯ ಸಚಿವರಾಗಿ ದಿನೇಶ್ ಗುಂಡೂರಾವ್ ಇಲಾಖೆಯಲ್ಲಿ ಹಲವು ಸುಧಾರಣೆಗಳನ್ನ ತರುತ್ತಿದ್ದು, ನಮ್ಮ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನ ಅನುಷ್ಠಾನಗೊಳಿಸುತ್ತಿದೆ. ಜನಸಾಮಾನ್ಯರ ಆರೋಗ್ಯ ಸೇವೆಗಳನ್ನು ಒದಗಿಸುವ ವಿಚಾರದಲ್ಲಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದರು.



