ಬೆಂಗಳೂರು: ಚಿನ್ನದನಾಡು ಅವಿಭಜಿತ ಕೋಲಾರ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ತಲೆ ನೋವಾಗಿ ಪರಿಣಮಿಸಿದೆ. ಬಣ ರಾಜಕೀಯ ನಿಭಾಯಿಸಲಾಗದೆ ರಾಜ್ಯ ಹಾಗೂ ರಾಷ್ಟ್ರ ನಾಯಕರು ಹೈರಾಣಾಗಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಹಲವು ರೀತಿಯ ಕಸರತ್ತು ನಡೆಸಿರುವ ಸಿಎಂ ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಚ್ 28ರಂದು ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹಿರಿಯ ನಾಯಕ ಶಿವಶಂಕರ ರೆಡ್ಡಿ, ಯುವ ಮುಖಂಡ ರಕ್ಷಾ ರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ಮೂವರಲ್ಲಿ ಯಾರಾದರೂ ಒಬ್ಬರನ್ನು ಆಯ್ಕೆ ಮಾಡಿ ಎಂದು ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚಿಸಿದೆ.
ಹೀಗಾಗಿ ಈ ಮೂವರಲ್ಲಿ ಯಾರನ್ನು ಕಣಕ್ಕೆ ಇಳಿಸಿದರೆ ಸೂಕ್ತ ಎಂಬ ಬಗ್ಗೆ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರ ಅಭಿಪ್ರಾಯ ಆಲಿಸಿ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಆದರೆ ಕೋಲಾರ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಮಾತ್ರ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣ ನಡುವಿನ ಪ್ರತಿಷ್ಠೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಮ್ಮತ ಮೂಡಿಸಲು ನಾಯಕತ್ವ ನಡೆಸುತ್ತಿರುವ ಎಲ್ಲ ಪ್ರಯತ್ನಗಳು ವಿಫಲವಾಗಿವೆ.
ತಾವು ಹೇಳಿದವರಿಗೆ ಟಿಕೆಟ್ ನೀಡದೆ ಹೋದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಪ್ರಚಾರದಲ್ಲಿ ತೊಡಗುತ್ತೇನೆ ಎಂದು ಸಚಿವ ಮುನಿಯಪ್ಪ ಬೆದರಿಕೆ ಹಾಕಿದರೆ, ಸಚಿವ ಮುನಿಯಪ್ಪ ಅವರ ಒತ್ತಡಕ್ಕೆ ಮಣಿದದ್ದೆ ಆದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೊತ್ತನೂರು ಮಂಜುನಾಥ್ ಅನಿಲ್ ಕುಮಾರ್, ನಜೀರ್ ಅಹ್ಮದ್ ಬೆದರಿಕೆ ಹಾಕಿದ್ದಾರೆ.
ರಮೇಶ್ ಕುಮಾರ್ ಅವರ ಬಣ ಕೋಲಾರ ಕ್ಷೇತ್ರದಿಂದ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅವರಿಗೆ ಟಿಕೆಟ್ ನೀಡಬೇಕು. ಇಲ್ಲವಾದರೆ ಬಲಗೈ ಸಮುದಾಯಕ್ಕೆ ಸೇರಿದ ಎಂ.ಸಿ.ಮುನಿಯಪ್ಪ ಅಥವಾ ಭೋವಿ ಸಮುದಾಯದ ಡಾ.ಬಿ.ಸಿ.ಮುದ್ದುಗಂಗಾಧರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದೆ.
ಇದಕ್ಕೆ ತಿರುಗೇಟು ನೀಡಿರುವ ಸಚಿವ ಮುನಿಯಪ್ಪ, ತಮ್ಮ ಅಳಿಯ ಚಿಕ್ಕ ಪೆದ್ದನ್ನ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ .ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.




