ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ

2 months ago

Breaking

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ನಿಲ್ದಾಣದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಬೊಮ್ಮನಾಳ ಗ್ರಾಮದ ಮಹಾಂತೇಶ ಮಾನೆ (32), ಅವರ ಪತ್ನಿ ಸಾಕ್ಷಿ ಮಾನೆ (29) ಹಾಗೂ ಪುತ್ರ ಸಮರ್ಥ (9) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಮೃತರು ಬೈಕ್‌ನಲ್ಲಿ ಸಂತೆಗೆ ತೆರಳಿ ವಾಪಸ್ ತಮ್ಮ ಊರಿಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಗೂಡ್ಸ್ ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆಯೇ ರಾಯಬಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ದುರ್ಘಟನೆಯಿಂದ ಬೊಮ್ಮನಾಳ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Leave a Reply