ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಕಟ್ಟಡ ನಿರ್ಮಾಣ ಕಾರ್ಮಿಕರ 4 ನೇ ಜಿಲ್ಲಾ ಸಮ್ಮೇಳನವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ಚಿಂತಕ ಹಾಗೂ ನಿವೃತ್ತ ಪ್ರಾಂಶುಪಾಲ ಯಾದವರೆಡ್ಡಿ, ಕಾರ್ಮಿಕ ನಿರೀಕ್ಷಕ ರಾಜಣ್ಣ, ಪೊಲೀಸ್ ವೃತ್ತ ನಿರೀಕ್ಷಕ ಶಂಕರಪ್ಪ, ಸಿಐಟಿಯು ಮುಖಂಡ ಡಿ.ಎಂ.ಮರಿಯಪ್ಪ, ಟಿ.ತಿಪ್ಪೇಸ್ವಾಮಿ ವಕೀಲ ಆರ್ ಓಬಳೇಶ್ ಭಾಗವಹಿಸಿದರು.
ಸಮ್ಮೇಳನ ಉದ್ಘಾಟನೆ ಮುನ್ನ ನೂರಕ್ಕೂ ಅಧಿಕ ಕಾರ್ಮಿಕರು ಪ್ರವಾಸಿ ಮಂದಿರದಿಂದ ಐಎಂಎ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು.
ಸಮ್ಮೇಳನದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ನಾಗರಾಜ ಆಚಾರಿ ವಹಿಸಿದ್ದರು ಸಮ್ಮೇಳನದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗೌಸ್ ಪೀರ್ ವರದಿ ಮಂಡಿಸಿದರು. ಬಳಿಕ ಹೊಳಲ್ಕೆರೆ ತಾಲೂಕು ಅಧ್ಯಕ್ಷ ದೇವರಾಜ್, ಹೊಸದುರ್ಗ ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿದರು.
ನೂತನ ಜಿಲ್ಲಾ ಸಮಿತಿ ಅಧ್ಯಕ್ಷ ನಾಗರಾಜಚಾರಿ, ಪ್ರಧಾನ ಕಾರ್ಯದರ್ಶಿ ಸಿ.ಕೆ.ಗೌಸ್‌ಪೀರ್ ಖಜಾಂಚಿಯಾಗಿ ಉಮೇಶ್ ಸೇರಿ 13 ಜನ ಪದಾಧಿಕಾರಿಗಳನ್ನು ಹಾಗೂ ಜಿಲ್ಲಾ ಸಮಿತಿಯನ್ನು ಸಮ್ಮೇಳನ ಆಯ್ಕೆ ಮಾಡಿತು. ಇದರ ಜತೆಗೆ ಜೂನ್ 26-27 ರಂದು ತುಮಕೂರಿನಲ್ಲಿ ನಡೆಯುವ 4 ನೇ ರಾಜ್ಯ ಸಮ್ಮೇಳನಕ್ಕೆ ಎರಡು ಮಹಿಳೆಯರು ಸೇರಿ ಒಟ್ಟು 8 ಪ್ರತಿನಿಧಿ ವೀಕ್ಷಕರನ್ನು ಆಯ್ಕೆ ಮಾಡಲಾಯಿತು. ತುಮಕೂರು ಸಮ್ಮೇಳನ ಲೋಗೋವನ್ನು ಬಿಡುಗಡೆಗೊಳಿಸಲಾಯಿತು ಮತ್ತು ಇದೇ ಸಂದರ್ಭದಲ್ಲಿ ಹಿರಿಯ ಕಾರ್ಮಿಕರಿಗೆ ಸನ್ಮಾನ ಮಾಡಿ ಗೌರವಿರಲಾಯಿತು.



