ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎಂಟು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ,ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ ಶಿವಕುಮಾರ್, ಸೂರಜ್ ಅವರನ್ನು 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಬಂಧನವಾಗಿದ್ದ ಸೂರಜ್ ರೇವಣ್ಣ ಅವರನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು.




