ಬೆಂಗಳೂರು: ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಕಳೆದ ಐದು ದಿನಗಳಿಂದ ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ತಲೆ ಮರೆಸಿಕೊಂಡಿರುವ ಶಾಸಕನಿಗಾಗಿ ಗೋವಾ, ಮಹಾರಾಷ್ಟ್ರ ಭಾಗದಲ್ಲಿ ಹುಡುಕಾಟ ನಡೆಸಿದ್ದು, ಎಲ್ಲಿಯೂ ಭೈರತಿ ಬಸವರಾಜ್ ಪತ್ತೆಯಾಗಿಲ್ಲ. ಪುಣೆಯಲ್ಲಿ ಕೊನೆಯದಾಗಿ ಅವರ ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಇದಾದ ಬಳಿಕ ಗೋವಾ ಕಡೆಗೆ ಪ್ರಯಾಣ ಮಾಡಿರುವುದು ಬೆಳಕಿಗೆ ಬಂದಿದೆ. ಬಳಿಕ ಎಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಿಲ್ಲ.
ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯು ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ವಜಾಗೊಂಡಿದೆ. ಇದರ ಬೆನ್ನಲ್ಲೇ ಸಿಐಡಿ ಎಸ್‌ಐಟಿ ಟೀಂ ಮಾಜಿ ಸಚಿವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಕಳೆದ ಜುಲೈ 15ರ ರಾತ್ರಿ ರೌಡಿ ಶೀಟರ್ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು, ಈತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
ಜು.15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮೀನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು.
ಹತ್ಯೆಯು ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಸಹ ಬಯಲಾಗಿವೆ. ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮಿ ನೀಡಿರುವ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇದರಲ್ಲಿ ಕೆಆರ್ ಪುರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಎ5 ಆರೋಪಿಯಾಗಿ ಹೆಸರಿಸಲಾಗಿದೆ ಬಿಕ್ಲು ಶಿವ ಹತ್ಯೆಗೆ ಪ್ರೇರಣೆ ನೀಡಿದ ಆರೋಪ ಬೈರತಿ ಬಸವರಾಜ್ ಮೇಲಿದೆ. ಈ ಕೇಸ್‌ನಲ್ಲಿ ಬೈರತಿ ಬಸವರಾಜ್ ಆಪ್ತ ಜಗದೀಶ್ ಅಲಿಯಾಸ್ ಜಗ್ಗ ಎ1 ಆಗಿದ್ದರೆ ಕಿರಣ್ ಸೇರಿದಂತೆ ಹಲವರ ಹೆಸರಿದೆ.




