ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ಸಂದರ್ಭದಲ್ಲಿ ಹೊರಗಿಟ್ಟಿರುವ 13 ದಲಿತ ಕ್ರೈಸ್ತ ಜಾತಿಗಳ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ಮನವಿ ಮಾಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಗೆ ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್.ರವಿಕುಮಾರ್, ಉಪಾಧ್ಯಕ್ಷ ಎನ್.ಮಹೇಶ್, ಕಾರ್ಯದರ್ಶಿ ಶರಣು ತಳಿಕೇರಿ, ಮಾಜಿ ಸಂಸದ ಎಸ್.ಮುನಿಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಮತ್ತಿತರರ ನಿಯೋಗವು ಮನವಿಪತ್ರ ಸಲ್ಲಿಸಿ ಈ ವಿಚಾರವಾಗಿ ಜನತೆಯಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕೆಂದು ಆಗ್ರಹಿಸಿದರು.
ಕ್ರಿಶ್ಚಿಯನ್ ಉಪಜಾತಿಗಳ ಸಮೀಕ್ಷೆಯ ಆಪ್‌ನಲ್ಲಿ ಬಹಿರಂಗಪಡಿಸದ ಅಧಿಕೃತ ಪ್ರಕಟಣೆಯನ್ನು ಆಯೋಗ ಕೊಡಬೇಕು ಎಂದು ಮನವಿ ಮಾಡಿದರು.
ಈ ವಿಷಯದಲ್ಲಿ ಅತ್ಯಂತ ಜವಾಬ್ದಾರಿಯುತ ಸಂಸ್ಥೆಯಾದ ಹಿಂದುಳಿದ ವರ್ಗಗಳ ಆಯೋಗ 33 ಕ್ರೈಸ್ತ ಜಾತಿಗಳ ಬಗ್ಗೆ ಸ್ಪಷ್ಟನೆ ಕೊಟ್ಟು, ಉಳಿದ 13 ದಲಿತ ಕ್ರೈಸ್ತ ಜಾತಿಗಳ ಬಗ್ಗೆ ಸ್ಪಷ್ಟನೆ ಕೊಡದೆ, ಕತ್ತಲಲ್ಲಿ ಇಟ್ಟಿರುವುದು ಸಮರ್ಥನೀಯವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎರಡು ತಿಂಗಳ ಹಿಂದೆಯಷ್ಟೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಒಳ ಮೀಸಲಾತಿಗಾಗಿ 101 ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನೇ ಮಾಡಿತ್ತು. ಆಗ ಈ 15 ಕ್ರೈಸ್ತ ಎಸ್‌ಸಿ ಜಾತಿಗಳು ಇರಲಿಲ್ಲ. ಆದರೆ ಈಗ ಇವು ಏಕಾಏಕಿ ಪ್ರತ್ಯಕ್ಷವಾಗಿ ಆಶ್ಚರ್ಯ ಮೂಡಿಸಿದೆ ಎಂದು ಹೇಳಿದರು.
ನ್ಯಾ.ನಾಗಮೋಹನ್‌ದಾಸ್ ಆಯೋಗದ ಸಮೀಕ್ಷೆಯ ದತ್ತಾಂಶಗಳ ಆಧಾರದಲ್ಲಿ ಪ್ರವರ್ಗಗಳ ರಚನೆಯಾಗಿ ಮೀಸಲಾತಿಯ ವರ್ಗೀಕರಣವಾಗಿದೆ. ಈಗ ನಿಮ್ಮ ಆಯೋಗದಿಂದ 15 ಹೊಸ ಕ್ರೈಸ್ತ ಎಸ್‌ಸಿ ಜಾತಿಗಳ ಸೇರ್ಪಡೆಯಾಗಿ ಸಮೀಕ್ಷೆ ನಡೆದರೆ ದೊಡ್ಡ ಗೊಂದಲ ಉಂಟಾಗಿ ದತ್ತಾಂಶಗಳು ಏರುಪೇರಾಗುತ್ತದೆ. ಹೀಗಾಗಿ ನೀವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದರು.
ಆನ್‌ಲೈನ್‌ನಲ್ಲಿ ಲಭ್ಯವಿರುವ ಆಯೋಗದ ಕೈಪಿಡಿಯಲ್ಲಿ ತಾವು ಈ ತಪ್ಪನ್ನು ಸರಿಪಡಿಸಿರುವುದು ನಿಜ. ಆದರೆ ಸಮೀಕ್ಷೆಗೆ ಬಳಸುವ ಆ್ಯಪ್‌ನಲ್ಲಿಯೂ ಈ 15 ಎಸ್‌ಸಿ ಜಾತಿಗಳನ್ನು ಬಹಿರಂಗಪಡಿಸಬೇಕು ಮತ್ತು ಅದನ್ನು ಸಾರ್ವಜನಿಕರ ಅವಗಾಹನೆಗೆ ಮಾಧ್ಯಮಗಳ ಮೂಲಕ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.




