ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪರಿಶಿಷ್ಟ ಪಂಗಡ ಸಮುದಾಯಗಳ ಜೊತೆಗಿನ ಸಭೆಯ ನಂತರ ಮಾಧ್ಯಮಗಳಿಗೆ ನನ್ನ ಪ್ರತಿಕ್ರಿಯೆ ನೀಡಿದ ಅವರು, ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ನಿಗಮಕ್ಕೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಕ್ಕೂ ಸಭೆ ಗಮನ ನೀಡಿದೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ ಎಂದರು.
ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದರು.




