ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ: ದಿನೇಶ್ ಗುಂಡೂರಾವ್

3 years ago

ಬೆಂಗಳೂರು: ಸಮಾಜ ಸೇವವಕ ಮತ್ತು ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತ ರಾಜ್ ಕಾರ್ತಿಕ್ ಇಂದಿನ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರು ಕೇಂದ್ರ ಕಾಂಗ್ರೆಸ್ ಸಮಿತಿ ಎಸ್.ಸಿ.ವಿಭಾಗದ ಅಧ್ಯಕ್ಷ ರಾಜ್ ಕಾರ್ತಿಕ್ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತಾಡಿದ ಅವರು, ಕೊರೋನ ಸಾಂಕ್ರಮಿಕ ಲಾಕ್ ಡೌನ್ ಸಂದರ್ಭದಲ್ಲಿ ಸಾವಿರಾರು ಜನರಿಗೆ ದಿನಸಿ ಕಿಟ್ ಮತ್ತು ಔಷಧಿ ವಿತರಣೆ ಮಾಡಿದ್ದಾರೆ. ರಾಜ್ ಕಾರ್ತಿಕ್ ರವರು ಕಾಂಗ್ರೆಸ್ ಪಕ್ಷದ ಅನೇಕ ಹೋರಾಟಗಳಲ್ಲಿ ಭಾಗಿಯಾಗಿ, ಪಕ್ಷ ಸಂಘಟನೆಗೆ ಅವಿರತವಾಗಿ ಶ್ರಮಿಸಿದ್ದಾರೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ರಾಜ್ ಕಾರ್ತಿಕ್ ರಂತಹ ಸಾವಿರಾರು ಯುವಕರಿಗೆ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ ಎಂದರು.

ತಬ್ಬು ಗುಂಡೂರಾವ್, ಅನನ್ಯ ದಿನೇಶ್ ಗುಂಡೂರಾವ್ ಮೊದಲಾದವರು ಹಾಜರಿದ್ದರು.

Leave a Reply