ಬಳ್ಳಾರಿ: ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ಅನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಎಂದರು.
ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಆದೇಶದ ಮೇರೆಗೆ ಸಂಡೂರು ತಾಲ್ಲೂಕು ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಡಾ.ಇಂದ್ರಾಣಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್ ನೇತೃತ್ವದ ತಂಡವು ದಾಳಿ ನಡೆಸಿ, ಕ್ಲಿನಿಕ್ ಅನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದಿದ್ದಾರೆ.
ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಸಾರ್ವಜನಿಕರಲ್ಲಿ ಕೋರಿದರು.
ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ, ಅವರ ವೈದ್ಯಕೀಯ ಪದವಿ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ನಕಲಿ ವೈದ್ಯರು ಎಂದು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ಕ್ರಮ ಜರುಗಿಸಲಾಗುವುದು ಎಂದರು.
ದಾಳಿವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಂಡೆಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ನಿಜಾಮುದ್ದೀನ್ ಉಪಸ್ಥಿತರಿದ್ದರು.




