ಬೆಂಗಳೂರು: ವಿಶ್ವ ಅಂಗಾಂಗ ದಾನ ದಿನದಂದು ಸಿಎಂ ಬಸವರಾಜ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ.
"ಮಣ್ಣಲ್ಲಿ ಮಣ್ಣಾಗಿ ಹೋಗುವ ದೇಹದ ಅಂಗಗಳಿಂದ ಇನ್ನೊಂದು ಜೀವವನ್ನು ಉಳಿಸಲು ಸಾಧ್ಯವಿದೆ. ನಾನೂ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸುತ್ತಿದ್ದೇನೆ. ನಾವೆಲ್ಲರೂ ಅಂಗಾಂಗ ದಾನ ಮಾಡಲು ಮುಂದೆ ಬರುವ ಸಂಕಲ್ಪ ಮಾಡೋಣ"
— Basavaraj S Bommai (@BSBommai) August 13, 2021
ಟ್ವಿಟ್ಟರ್ನಲ್ಲಿ ಅಂಗಾಗ ದಾನಕ್ಕೆ ಕರೆ ನೀಡಿದ ಅವರು, ಮಣ್ಣಲ್ಲಿ ಮಣ್ಣಾಗಿ ಹೋಗುವ ದೇಹದ ಅಂಗಗಳಿಂದ ಇನ್ನೊಂದು ಜೀವವನ್ನು ಉಳಿಸಲು ಸಾಧ್ಯವಿದೆ. ನಾನೂ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸುತ್ತಿದ್ದೇನೆ. ನಾವೆಲ್ಲರೂ ಅಂಗಾಂಗ ದಾನ ಮಾಡಲು ಮುಂದೆ ಬರುವ ಸಂಕಲ್ಪ ಮಾಡೋಣ ಎಂದಿದ್ದಾರೆ.
ವಿಶ್ವ ಅಂಗಾಂಗ ದಾನ ದಿನವಾದ ಇಂದು ಅಂಗಾಂಗ ದಾನ ಕುರಿತು ಜಾಗೃತಿ ಮೂಡಿಸಿದ್ದಾರೆ. ಒಬ್ಬ ವ್ಯಕ್ತಿ ಮೃತಪಟ್ಟ ನಂತರ ಅಂಗಾಂಗಗಳನ್ನು ದಾನ ಮಾಡಿದರೆ 8 ಜೀವಗಳನ್ನು ಉಳಿಸಲು ಸಾಧ್ಯವಿದೆ. ವಿದೇಶದಲ್ಲಿ ಇದರ ಪ್ರಮಾಣ ಹೆಚ್ಚಿದ್ದರೆ ಭಾರತದಲ್ಲಿ ಅಂಗಾಂಗ ದಾನಿಗಳ ಸಂಖ್ಯೆರ ಕಡಿಮೆ ಇದೆ.



