ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಧೃಡ

5 years ago

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಧೃಡಪಟ್ಟಿದೆ.

ತಮಗೆ ಕೊರೊನಾ ಪಾಸಿಟಿವ್ ಇರುವ ಅಂಶವನ್ನು ಸ್ವತಃ ಯಡಿಯೂರಪ್ಪ ಘೋಷಿಸಿಕೊಂಡಿದ್ದು, ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ ಎಂದು ಜಾಲತಾಣಗಳಲ್ಲಿ ಹೇಳಿದ್ದಾರೆ.

ಅಲ್ಲದೇ, ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದಿದ್ದಾರೆ.

Leave a Reply