ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು
ಬೆಂಗಳೂರು: ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೆ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ವಿಶ್ವಾಸ ಹೊರಟುಹೋಗಿದೆ ಎಂದರು.
2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದರು.
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.
ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದರು.




