ಬೆಂಗಳೂರು: ಸಿಎಂ, ಡಿಸಿಎಂ ಮಾತ್ರವಲ್ಲದೆ ರಾಜ್ಯ ಸರ್ಕಾರದ ಎಲ್ಲ ಸಚಿವರು ತಮ್ಮ ಕರೆಗಳಿಗೆ ಸ್ಪಂದಿಸುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಶಾಸಕರ ಅಹವಾಲು ಆಲಿಸಲು ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೆವಾಲ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, ತಮಗೆ ಯಾವುದೇ ಸಚಿವರ ಕಾರ್ಯ ವೈಖರಿಯ ಬಗ್ಗೆ ಅತೃಪ್ತಿ ಇಲ್ಲ ಎಂದರು.
ಭೇಟಿ ಸಮಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಹೇಗೆ ಸಂಘಟನೆ ಮಾಡಬೇಕು, ಅದರ ಬಗ್ಗೆ ಸುರ್ಜೇವಾಲಾ ಅವರು ಹೇಳಿದ್ದಾರೆ. ಅದರ ಪ್ರಕಾರ ಪಕ್ಷ ಸಂಘಟನೆಯಾಗಬೇಕು. ಸ್ಥಳೀಯ ಚುನಾವಣೆ ಎಲ್ಲವೂ ಗೆಲ್ಲಬೇಕು. ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಬೇಕು. ಅದಕ್ಕೆ ಏನೆಲ್ಲಾ ಕಾರ್ಯತಂತ್ರ ಮಾಡಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು ಎಂದರು.
ಕ್ಷೇತ್ರದ ಅನುದಾನ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿ, ಅನುದಾನ ಸಮಸ್ಯೆ ಬಗ್ಗೆ ಅಭಿಪ್ರಾಯ ಕೇಳಿದ್ರು. ಸಣ್ಣಪುಟ್ಟ ಲೋಪದೋಷದ ಬಗ್ಗೆ ಸಲಹೆ ನೀಡಿದ್ದೇವೆ. ಇದ್ದರಿಂದ ಪಕ್ಷಕ್ಕೂ ಒಳ್ಳೆದು ಆಗುತ್ತದೆ. ಯಾರು ಏನು ಹೇಳಿದ್ದಾರೆ ಅಂತ ಗೊತ್ತಿಲ್ಲ ಎಂದರು.
ನಾನು ಯಾರೇ ಸಚಿವರಿಗೆ ಪೋನ್ ಮಾಡಿದ್ರೆ ನನ್ನ ಪೋನಿಗೆ ಸಚಿವರು ರೆಸ್ಪಾನ್ಸ್ ಮಾಡ್ತಾರೆ. ಇನ್ನು ಸಭೆಯಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ಆಗಿದ್ಯ ಎಂಬ ವಿಚಾರವಾಗಿ, ಅಂತಹ ಸಂದರ್ಭ ಇನ್ನು ಬಂದಿಲ್ಲ. ಸಿಎಂ ಡಿಸಿಎಂ ಜೊತೆಗೆ ಒಳ್ಳೆ ಬಾಂಧವ್ಯವಿದೆ. ಅದರ ಬಗ್ಗೆ ಏನು ಚರ್ಚೆ ನಡೆದಿಲ್ಲ ಎಂದರು.




