ಮುಖ್ಯಮಂತ್ರಿ ಬದಲಾವಣೆ ಎಂಬುದು ಮಾಧ್ಯಮಗಳ ಚರ್ಚೆ: ಸಿದ್ದರಾಮಯ್ಯ

1 year ago

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿರುವ ‌ಅವರು, ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ’ ಎಂದು ಪುನರುಚ್ಚರಿಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂಥ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ. ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

Leave a Reply