ಮೈಸೂರು: ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ

ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ ಎಂದರು.

ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಇದಕ್ಕಾಗಿ ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದರು.

ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.





