ಹೈಕಮಾಂಡ್ ಭೇಟಿಗೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ‘ಉಪಹಾರ ಸಭೆ’

3 weeks ago

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ. ಜಾರ್ಜ್ ಹಾಗೂ ಎಂ.ಬಿ. ಪಾಟೀಲ್ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ನಾಯಕರು ದೆಹಲಿಯ ಕರ್ನಾಟಕ ಭವನದಲ್ಲಿ ಬೆಳಗಿನ ಉಪಹಾರ ಸಭೆಯಲ್ಲಿ ಭಾಗವಹಿಸಿದರು.

ಈ ವೇಳೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಹರಿಯಾಣ ಉಸ್ತುವಾರಿ ಬಿ.ಕೆ. ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರ ಪೊನ್ನಣ್ಣ ಕೂಡ ಉಪಸ್ಥಿತರಿದ್ದರು.

ಕಾಂಗ್ರೆಸ್ ಹೈಕಮಾಂಡ್ ಭೇಟಿಗೂ ಮುನ್ನ ನಡೆದ ಈ ಅನೌಪಚಾರಿಕ “ಉಪಹಾರ ಸಭೆ” ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷ ಸಂಘಟನೆ ಕುರಿತಂತೆ ಮಹತ್ವದ ಚರ್ಚೆಗಳು ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply