ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಪದ್ಧತಿ ಸೇರಿದಂತೆ ಅನೇಕ ಕಾರಣಗಳಿಂದಾಗಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕ್ಯಾನ್ಸರ್ ನಿಂದಾಗಿ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಿಮೋಥೆರಪಿಗೆ ಬಳಸುವ ಅನೇಕ ಔಷಧಗಳನ್ನು ಕಸ್ಟಮ್ಸ್ ಸುಂಕ ರಿಯಾಯಿತಿ ನೀಡಲಾಗಿದೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖರಾಗಲು ಮುಂದುವರಿದ ಚಿಕಿತ್ಸಾ ಭಾಗವಾಗಿ ಕಿಮೋಥೆರಪಿಯ ಜೊತೆಗೆ ಇಮ್ಯೂನೋಥೆರಪಿಯ ಅವಶ್ಯಕತೆ ಇದ್ದು, ಪ್ರಸ್ತುತ ಇಮ್ಯೂನೋಥೆರಪಿ ಚಿಕಿತ್ಸೆಗೆ ಪ್ರತಿ ರೋಗಿಗೆ ಸುಮಾರು 20-50 ಲಕ್ಷ ದಷ್ಟು ಖರ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಯಿಂದ ಕ್ಯಾನ್ಸರ್ ಚಿಕಿತ್ಸಾ ವೆಚ್ಚ ಕಡಿಮೆಯಾಗಲಿದ್ದು, ಇದರಿಂದಾಗಿ ಲಕ್ಷಾಂತರ ಬಡವರಿಗೆ ಅನುಕೂಲವಾಗಲಿದೆ ಮತ್ತು ಕೈಗೆಟಕುವ ದರದಲ್ಲಿ ಬಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ.
ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
– ಡಾ.ಸಿ.ಎನ್.ಮಂಜುನಾಥ್, ಸಂಸದ




