ಮೈಸೂರು: ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




