ನೋಂದಣಿಗೆ ಆಹ್ವಾನ
ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ(ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.
ಆಸಕ್ತರು ಆ.09 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



