ಶಿವಮೊಗ್ಗ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನ.11 ರಂದು ಬೆಳಗ್ಗೆ 9.30ಕ್ಕೆ ನಗರದ ದುರ್ಗಿಗುಡಿಯಲ್ಲಿರುವ ಸರ್ಕಾರಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯ ಚಟುವಟಿಕೆಗಳಾದ ಭಾವಗೀತೆ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಚಿತ್ರ ಬರೆಯುವುದು, ಸ್ಥಳದಲ್ಲೇ ಪಾಠೋಪಕರಣ ತಯಾರಿಕೆ, ಸಾಮಾನ್ಯ ಜ್ಞಾನ ರಸಪ್ರಶ್ನೆ ಹಾಗೂ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸುವುದು ಹಾಗೂ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ. ಸ್ಪರ್ಧೆಗಳು ಕನ್ನಡ ಮಾಧ್ಯಮದಲ್ಲಿ ನಡೆಸಲಾಗುವುದು. ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಶಿಕ್ಷಕರು ಭಾಗವಹಿಸಬಹುದಾಗಿದೆ. ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದ್ದ ಶಿಕ್ಷಕರು ಪುನಃ ಅದೇ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ವಿಜೇತರಾದ ಶಿಕ್ಷಕರಿಗೆ ಪ್ರಶಸ್ತಿ ಪತ್ರ ಹಾಗು ನಗದು ಬಹುಮಾನವಿರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಇವರನ್ನು ಸಂಪರ್ಕಿಸಬಹುದು.




