ಸಂಕ್ರಾಂತಿಗೆ ಬರಲಿದೆ ಶಿವರಾಜ್ ಕುಮಾರ್, ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್

2 years ago

#Sankranti #ShivarajKumar #Dhanush #CaptainMiller

ತಮಿಳು ಸ್ಟಾರ್ ಧನುಷ್, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ಕುಮಾರ್ ಅಭಿನಯದ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಡಿಸೆಂಬರ್‌ನಲ್ಲಿ ತೆರೆಗೆ ಬರಬೇಕಿದ್ದ ಸಿನಿಮಾ ಕೆಲವು ಕಾರಣಗಳಿಂದಾಗಿ ಮುಂದಕ್ಕೆ ಹೋಗಿದ್ದು 2024ರ ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ. ಈಗಾಗಲೇ ಇದೇ ದಿನದಂದು ದಕ್ಷಿಣ ಭಾರತದ ಹಲವು ಸ್ಟಾರ್ ಗಳ ಸಿನಿಮಾಗಳು ಬಿಡುಗಡೆಗೆ ಸಿದ್ಧತೆ ನಡೆಸಿವೆ. ಇದರೊಂದಿಗೆ ಪೈಪೋಟಿ ನೀಡಲು ಕ್ಯಾಪ್ಟನ್ ಮಿಲ್ಲರ್ ಕೂಡ ಸಜ್ಜಾಗಿದೆ.

ಕ್ಯಾಪ್ಟನ್ ಮಿಲ್ಲರ್ ಸಿನಿಮಾವನ್ನು ಅರುಣ್ ಮಾದೇಶ್ವರನ್ ನಿರ್ದೇಶಿಸಿದ್ದು, ಇದು ಧನುಷ್ ವೃತ್ತಿಜೀವನದ ಅತ್ಯಂತ ದೊಡ್ಡ ಬಜೆಟ್ ಸಿನಿಮಾ ಎಂದೇ ಪರಿಗಣಿತವಾಗಿದೆ. ಬಿಡುಗಡೆಯಾಗಿರುವ ಚಿತ್ರದ ಟೀಸರ್ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ವಿಷಯವನ್ನು ಪ್ರಸ್ತಾಪಿಸಿರುವ ಚಿತ್ರ ನಿರ್ಮಾಪಕರು ಕ್ಯಾಪ್ಟನ್ ಮಿಲ್ಲರ್ ಪ್ಯಾನ್ ಇಂಡಿಯಾ ಚಿತ್ರ 2024ರ ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ ಎಂದಿದ್ದಾರೆ.

ಈ ಸಿನಿಮಾವನ್ನು 1930-40ರ ಬ್ಯಾಕ್‌ ಡ್ರಾಪ್‌ನಲ್ಲಿ ಚಿತ್ರೀಕರಿಸಲಾಗಿದೆ. ಜೊತೆಗೆ ಇದು ಜೈಲರ್ ಚಿತ್ರದ ನಂತರ ಶಿವರಾಜ್‌ ಕುಮಾರ್ ನಟಿಸಿರುವ ಎರಡನೇ ತಮಿಳು ಸಿನಿಮಾ. ಚಿತ್ರದ ತಾರಾಗಣದಲ್ಲಿ ಸಂದೀಪ್ ಕಿಶನ್, ಪ್ರಿಯಾಂಕಾ ಅರುಳ್ ಮೋಹನ್ ಮೊದಲಾದವರು ಇದ್ದಾರೆ.

ಟಿ.ಜಿ.ತ್ಯಾಗರಾಜನ್, ಸೆಂಥಿಲ್ ತ್ಯಾಗರಾಜನ್ ಮತ್ತು ಅರ್ಜುನ್ ತ್ಯಾಗರಾಜನ್ ನಿರ್ಮಾಣದ ಹೊಣೆ ಹೊತ್ತಿದ್ದರೆ, ಜಿ ಸರವಣನ್ ಮತ್ತು ಸಾಯಿ ಸಿದ್ಧಾರ್ಥ್ ಸಹ ನಿರ್ಮಾಪಕರಾಗಿದ್ದಾರೆ. ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ, ಸಿದ್ಧಾರ್ಥ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

Leave a Reply