ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆಯ ಮುಖ್ಯಾಂಶಗಳು ಹೀಗಿವೆ:
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
• ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
• ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸೂಚನೆ ನೀಡಲಾಯಿತು.
• ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಯಿತು.
• ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು.
• ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು.
• ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಯಿತು.
• ಕಣಬರಗಿಯಲ್ಲಿ ಗಂಗಾಧರ ರಾವ್ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮಾಡಲಾಗುವುದು.
• ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು.
• ಅಟನ್ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧರಿಸಲಾಯಿತು.
• ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ ಮಾಡಲಾಗುವುದು.
• ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
• ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಮಾಡಲಾಯಿತು.
•ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ ಮಾಡಲು ಸೂಚಿಸಲಾಯಿತು.
• ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ನಿರ್ಧರಿಸಲಾಯಿತು.




