ಬೆಂಗಳೂರು: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯ ತೊಡೆದುಹಾಕಲು ಸಂಕಲ್ಪ ಮಾಡಿರುವ ರಾಜ್ಯ ಸರ್ಕಾರ ಇದಕ್ಕಾಗಿ ವಿಶೇಷ ಕಾನೂನು ಜಾರಿಗೆ ತರಲು ಮುಂದಾಗಿದೆ. ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯ ಇರಲೇಬಾರದು ಎಂದು ಪ್ರತಿಪಾದಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಸಲಹೆ ಮಾಡಿದ್ದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ವಿದ್ಯಾರ್ಥಿ ತಾರತಮ್ಯ ಎದುರಿಸಬಾರದು ಎನ್ನುವುದನ್ನು ಖಾತ್ರಿ ಪಡಿಸಲು ಕಾಯ್ದೆ ಜಾರಿಗೊಳಿಸುವ ಸಂಕಲ್ಪಕ್ಕೆ ಸರ್ಕಾರ ಬದ್ಧ ಮತ್ತು ದೃಢ ಎಂದಿದ್ದಾರೆ.
ರೋಹಿತ್, ಪಾಯಲ್, ದರ್ಶನ್ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು. ಬಿ.ಆರ್. ಅಂಬೇಡ್ಕರ್ ಅವರ ಸಮಾನ, ಸಹಾನುಭೂತಿಯ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ದಿಟ್ಟ ಹೆಜ್ಜೆ ಇಡಲಾಗುವುದು. ಆದಷ್ಟು ಬೇಗ ಈ ಕಾನೂನನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.
ಬಿ.ಆರ್. ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ್ದ ತಾರತಮ್ಯಕ್ಕೆ ಸಂಬಂಧಿಸಿದ ಹಲವು ಘಟನೆಗಳನ್ನು ರಾಹುಲ್ ಗಾಂಧಿ ಪತ್ರದಲ್ಲಿ ವಿವರಿಸಿದ್ದು, ಈ ಪತ್ರವನ್ನು ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.




