ಪ್ರತಿ ಶುಕ್ರವಾರ ವಿಶೇಷ ಲಾರ್ವ ಸಮೀಕ್ಷೆ
ಎಲ್ಲಾ ಇಲಾಖೆ, ಸಂಸ್ಥೆಯವರು ನಿಯಂತ್ರಣದ ಎಸ್.ಓ.ಪಿ ಅನುಸರಿಸಲು ಸೂಚನೆ
ದಾವಣಗೆರೆ: ರಾಜ್ಯಾದ್ಯಂತ ಡೆಂಗಿ ಹಾಗೂ ಚಿಕನ್ ಗುನ್ಯ ಪ್ರಕರಣಗಳ ಹೆಚ್ಚು ವರದಿಯಾಗುತ್ತಿದ್ದು ಮಳೆಗಾಲವಾಗಿರುವುದರಿಂದ ರೋಗ ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಇದರ ನಿಯಂತ್ರಣಕ್ಕೆ ಸಮುದಾಯ ಸಹಕಾರದ ಜೊತೆಗೆ ಎಲ್ಲಾ ಇಲಾಖೆ, ಸಂಸ್ಥೆಗಳು ಮುನ್ನೆಚ್ಚರಿಕೆ ಕ್ರಮವಾಗಿ ಡೆಂಗಿ ನಿಯಂತ್ರಣದ ಎಸ್.ಓ.ಪಿ. ಅನುಸರಿಸಲು ಮತ್ತು ಪ್ರತಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿರುವ ವಿಶೇಷ ಲಾರ್ವ ಸಮೀಕ್ಷೆ ಹಾಗೂ ನಿರ್ಮೂಲನೆಯಲ್ಲಿ ಕೈಜೋಡಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮಳೆಗಾಲದಲ್ಲಿ ಡೆಂಗಿ ಮತ್ತು ಚಿಕನ್ಗುನ್ಯಾ ಪ್ರಕರಣಗಳು ಹೆಚ್ಚು ವರದಿಯಾಗುತ್ತವೆ. ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಮತ್ತು ಲಸಿಕೆ ಇರುವುದಿಲ್ಲ. ಇದು ಈಡೀಸ್ ಸೊಳ್ಳೆ ಕಚ್ಚುವುದರಿಂದ ಅದರಲ್ಲಿಯು ಹಗಲು ಸಮಯದಲ್ಲಿ ಇದು ಕಚ್ಚುತ್ತದೆ. ಇದರ ನಿಯಂತ್ರಣಕ್ಕಾಗಿ ಸೊಳ್ಳೆಗಳ ಸಂತಾನ ಹೆಚ್ಚಳವಾಗದಂತೆ ನಿಯಂತ್ರಣ ಮಾಡುವುದೇ ಇದಕ್ಕೆ ಪರಿಹಾರೋಪಾಯವಾಗಿದ್ದು ಸಮುದಾಯದವರು ಮನೆಯ ಒಳಗೆ, ಹೊರಗೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ತೊಟ್ಟಿಗಳನ್ನು ಸರಿಯಾಗಿ ಮುಚ್ಚುವ ಮೂಲಕ ಲಾರ್ವ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಮನೆಯ ಹೊರಗೆ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಶಾಲಾ, ಕಾಲೇಜು, ಅಂಗಡಿ ಮುಂಗಟ್ಟುಗಳು, ಬಸ್ ಡಿಪೋಗಳು, ವಾಣಿಜ್ಯ ಸಂರ್ಕೀಣಗಳು, ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ಪ್ರದೇಶದಲ್ಲಿ ನೀರಿನ ಶೇಖರಣೆಯಾಗದಂತೆ ಮತ್ತು ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಂಡು ಅವುಗಳಲ್ಲಿ ಲಾರ್ವ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಖಾಸಗಿ ಆಸ್ಪತ್ರೆ, ಪ್ರಯೋಗಾಲಯಗಳು ಹೆಚ್ಚು ದರ ಪಡೆಯುವಂತಿಲ್ಲ: ರಾಜ್ಯಾದ್ಯಾಂತ ಡೆಂಗಿ ಪ್ರಕರಣಗಳು ಹೆಚ್ಚುತ್ತಿದ್ದು ಖಾಸಗಿ ಪ್ರಯೋಗಾಲಯಗಳು ಡೆಂಗಿ ಪರೀಕ್ಷೆಗಾಗಿ ದುಪ್ಪಟ್ಟು ದರ ಪಡೆಯಲಾಗುತ್ತಿದೆ ಎಂದು ದೂರಿದ್ದು ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ದರ ನಿಗದಿ ಮಾಡಿದೆ. ಡೆಂಗಿ ಪರೀಕ್ಷೆಯನ್ನು ಎಲಿಸಾ ಎನ್ಎಸ್1, ಐಜಿಎಂ ಪರೀಕ್ಷೆಗೆ ರೂ.300 ಹಾಗೂ ರ್ಯಾಪಿಡ್ ಕಾರ್ಡ್ ಟೆಸ್ಟ್ಗೆ ರೂ, 250 ಮಾತ್ರ ಪಡೆಯಬೇಕು.
ಆಸ್ಪತ್ರೆಗಳಲ್ಲಿ ದಾಖಲಾಗುವ ಶಂಕಿತ ಡೆಂಗಿ ಪ್ರಕರಣಗಳ ಚಿಕಿತ್ಸೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಿರ್ವಹಣೆ ಮಾಡಬೇಕು. ಆಸ್ಪತ್ರೆ ಆವರಣ, ಲ್ಯಾಬ್ಗಳಲ್ಲಿ ಲಾರ್ವ ಸಮೀಕ್ಷೆ ಮಾಡಿ ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು. ವಾರ್ಡ್ಗಳಲ್ಲಿ ರೋಗಿಗಳಿಗೆ ಸೊಳ್ಳೆಪರದೆಗಳನ್ನು ಉಪಯೋಗಿಸಬೇಕು. ಕಿಟಕಿಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು.
ಗ್ರಾಮೀಣ ಪ್ರದೇಶದಲ್ಲಿ ಲಾರ್ವ ನಿರ್ಮೂಲನೆಗೆ ಸೂಚನೆ; ಗ್ರಾಮಾಂತರ ಪ್ರದೇಶದಲ್ಲಿ ಲಾರ್ವ ನಿರ್ಮೂಲನೆಗಾಗಿ ಆರೋಗ್ಯ ಇಲಾಖೆಯೊಂದಿಗೆ ಸಮೀಕ್ಷೆ ನಡೆಸಿ ನಿರ್ಮೂಲನೆ ಮಾಡಬೇಕು. ಮನೆ ಮನೆ ಭೇಟಿ ನೀಡಿ ಮನೆಯಲ್ಲಿನ ತೊಟ್ಟಿ, ಅಂಗಳ, ಸುತ್ತಮುತ್ತಲಿನ ಪರಿಸರದ ಸಮೀಕ್ಷೆ ನಡೆಸಿ ಜನರಿಗೆ ಮಾರ್ಗದರ್ಶನ ಮಾಡಿ ನಿಂತ ನೀರನ್ನು ಹೋಗಲಾಡಿಸಲು ಮತ್ತು ಜನರಿಗೆ ಡೆಂಗಿ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಿ ಪ್ರತಿ ಶುಕ್ರವಾರ ಜಿಲ್ಲಾಡಳಿತದಿಂದ ಕೈಗೊಳ್ಳುವ ವಿಶೇಷ ಲಾರ್ವ ಸಮೀಕ್ಷೆ ಹಾಗೂ ನಿರ್ಮೂಲನಾ ಆಂದೋಲನದಲ್ಲಿ ಸಾರ್ವಜನಿಕರನ್ನು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿ ಗ್ರಾಮ ವ್ಯಾಪ್ತಿಯಲ್ಲಿನ ದೇವಸ್ಥಾನ, ಕಚೇರಿಗಳು, ಹೋಟೆಲ್, ಶಾಲಾ, ಕಾಲೇಜುಗಳ ಪರಿಸರದಲ್ಲಿ ಸಮೀಕ್ಷೆ ನಡೆಸಿ ಲಾರ್ವ ನಾಶಪಡಿಸಲು ಪಂಚಾಯಿತಿಯಿಂದ ಕ್ರಮ ಕೈಗೊಳ್ಳಬೇಕು.
ನಗರ, ಪಟ್ಟಣ ಪ್ರದೇಶದಲ್ಲಿ ಲಾರ್ವ ನಿರ್ಮೂಲನೆ; ನಗರಾಭಿವೃದ್ದಿ ಇಲಾಖೆಯಿಂದ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಪಾಲಿಕೆಯಿಂದ ಎಲ್ಲಾ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಾಗೃತಿ ಮೂಡಿಸಬೇಕು. ಶಾಲಾ, ಕಾಲೇಜಿನ ಆವರಣ, ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗಂತೆ ನೋಡಿಕೊಳ್ಳಬೇಕು. ಪ್ರತಿ ಶುಕ್ರವಾರ ಎಲ್ಲಾ ಸಾರ್ವಜನಿಕರು ಲಾರ್ವ ನಿರ್ಮೂಲನೆಯಲ್ಲಿ ಕೈಜೋಡಿಸಬೇಕು.
ಕೈಗಾರಿಕೆ ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಮಳೆ ನೀರು ಶೇಖರೆಯಾಗಂತೆ ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಾಲಾ, ಕಾಲೇಜು, ವಸತಿ ನಿಲಯ, ಅಂಗನವಾಡಿ ಕೇಂದ್ರ, ಶಾಲಾ ಸುತ್ತಮುತ್ತಲಿನ ಮೈದಾನದಲ್ಲಿ, ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗಂತೆ ನೋಡಿಕೊಳ್ಳಬೇಕು. ಅನುಪಯುಕ್ತ ಟೈರ್ಗಳು, ವಾಹನದ ಬಿಡಿಭಾಗಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಪ್ರತಿ ದಿನ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಮಕ್ಕಳಿಗೆ ಡೆಂಗಿ ನಿಯಂತ್ರಣಕ್ಕಾಗಿ ಲಾರ್ವ ನಿರ್ಮೂಲನೆ ಬಗ್ಗೆ ಮಾಹಿತಿ ನೀಡುವ ಮೂಲಕ ತಮ್ಮ ಮನೆ ಮತ್ತು ಸುತ್ತಮುತ್ತಲಿನ ಅಂಗಳದಲ್ಲಿ ಮಳೆ ನೀರು ಶೇಖರಣೆಯಾಗಂತೆ ಪೋಷಕರಿಗೆ ಮನವರಿಕೆ ಮಾಡಿಕೊಡಲು ಜಾಗೃತಿ ಮೂಡಸಬೇಕೆಂದು ತಿಳಿಸಲಾಗಿದೆ.
ಸಾರ್ವಜನಿಕರ ಸಹಭಾಗಿತ್ವ: ಸೊಳ್ಳೆಗಳ ಉತ್ಪತ್ತಿಯಾಗದಂತೆ ಸಿಮೆಂಟ್ ತೊಟ್ಟಿ, ಬ್ಯಾರೆಲ್, ಮಡಿಕೆ, ಏರ್ಕೂಲರ್, ಹೂ ಕುಂಡ, ತೆಂಗಿನಚಿಪ್ಪು, ಪ್ಲಾಸ್ಟಿಕ್ ವಸ್ತುಗಳು ಹಾಗೂ ಘನ ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗಂತೆ ನೋಡಿಕೊಳ್ಳಬೇಕು. ತೊಟ್ಟಿಯಲ್ಲಿ ನೀರು ಸಂಗ್ರಹಿಸುವಾಗ ಕಡ್ಡಾಯವಾಗಿ ಮುಚ್ಚಿರಬೇಕು. ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಉಪಯೋಗಿಸಬೇಕು. ಪ್ರತಿ ಶುಕ್ರವಾರ ವಿಶೇಷ ಲಾರ್ವ ಸಮೀಕ್ಷೆಯನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಿದ್ದು ಸಾರ್ವಜನಿಕರು ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿ ಡೆಂಗಿ ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ.




