ದಾವಣಗೆರೆ: ಫೆಬ್ರವರಿ 22ರಂದು ನಡೆಯುವ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಖಾಲಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ಪಾರದರ್ಶಕವಾಗಿ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಿ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅಧಿಕಾರಿಗಳಿಗೆ ತಿಳಿಸಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲಾಡಳಿತ ಭವನದನಲ್ಲಿ ಆಯೋಜಿಸಲಾಗಿದ್ದ ಬಿಡಿಎ, ಕೆಕೆಆರ್‌ಟಿಸಿ, ಕೆಎಸ್‌ಡಿಎಲ್, ತಾಂತ್ರಿಕ ಶಿಕ್ಷಣ ಇಲಾಖೆ, ಆರ್‌ಜಿಯುಹೆಚ್‌ಎಸ್, ಬಿಡಬ್ಲೂಎಸ್‌ಎಸ್‌ಬಿ, ಕೆಎಸ್‌ಎಸ್‌ಐಡಿಸಿ ಮುಂತಾದ ಇಲಾಖೆ, ಸಂಸ್ಥೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿಯ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 2205 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗಳಲ್ಲಿ ಎಷ್ಟೇ ಎಚ್ಚರವಹಿಸಿದರೂ ಕೆಲವು ತಪ್ಪುಗಳಾಗುತ್ತವೆ, ಹಾಗಾಗಿ ಪರೀಕ್ಷಾ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಪರೀಕ್ಷಾ ಮಾರ್ಗಸೂಚಿಗಳನ್ನು ಸರಿಯಾಗಿ ಓದಿಕೊಂಡು ಕರ್ತವ್ಯ ನಿರ್ವಹಿಸಬೇಕು. ತಾಂತ್ರಿಕತೆ ಬಹಳ ಮುಂದುವರೆದಿದ್ದು ಪರೀಕ್ಷೆಗಳಲ್ಲಿ ತಾಂತ್ರಿಕಕತೆ ಬಳಸುವ ಅಪಾಯವಿರುವುದರಿಂದ ಹೆಚ್ಚು ಜಾಗರೂಕರಾಗಿರಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಎಲೆಕ್ಟ್ರಾನಿಕ್ಸ್ ಸಾಧನಗಳಾದ ಮೊಬೈಲ್, ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಬ್ಲೂ ಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್, ಮೊದಲಾದ ವಸ್ತುಗಳಿಗೆ ನಿರ್ಬಂದವಿರುತ್ತದೆೆ, ಆದಾಗ್ಯೂ ಯಾವುದೇ ವ್ಯಕ್ತಿಗಳು ಇವುಗಳನ್ನು ಕೇಂದ್ರದೊಳಗೆ ತಂದರೆ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸಿ ಆಯೋಗ ನಡೆಸುವ ಎಲ್ಲಾ ಪರೀಕ್ಷೆಗಳಿಂದ ಡಿಬಾರ್ ಮಾಡಲಾಗುವುದು ಎಂದರು.
ಪರೀಕ್ಷಾ ಉಪ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು, ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಜಾಮರ್ ಕ್ಯಾಮರಾ ಒದಗಿಸಬೇಕು. ಪ್ರವೇಶ ಪತ್ರ ಮತ್ತು ಮೂಲ ಗುರುತಿನ ಚೀಟಿ ಹೊಂದಿರಬೇಕು. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿದ ಆಸನದಲ್ಲಿ ಕುಳಿತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ನಾಮಿನಲ್ ರೋಲ್‌ನಲ್ಲಿರುವ ಫೋಟೋ ಮತ್ತು ಸಹಿಯನ್ನು ಪರಾಮರ್ಶಿಸಿ ಅಭ್ಯರ್ಥಿಯ ಗುರುತನ್ನು ಖಚಿತಪಡಿಸಿಕೊಳ್ಳಬೇಕು. ಆಸೀನರಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಅವರದೇ ನೋಂದಣಿ ಸಂಖ್ಯೆಯುಳ್ಳ ಒ.ಎಂ.ಆರ್. ಹಾಳೆಗಳನ್ನು ನೀಡಿ ಅದರಲ್ಲಿರುವ ಅಂಕಣಗಳನ್ನು ಸೂಕ್ತವಾಗಿ ಭರ್ತಿ ಮಾಡುವಂತೆ ಕೊಠಡಿ ವೀಕ್ಷಕರು ಆಭ್ಯರ್ಥಿಗಳಿಗೆ ಸೂಚಿಸಬೇಕು.
ಕೊಠಡಿ ವೀಕ್ಷಕರು ಆಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಅದರಲ್ಲಿರುವ ಸೂಚನೆಗಳನ್ನು ಓದಿಕೊಂಡ ನಂತರ ಉತ್ತರಿಸಲು ತಿಳಿಸಬೇಕು. ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಉತ್ತಮ ಡೆಸ್ಕ್ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು, ಪರೀಕ್ಷಾ ಕೇಂದ್ರದಲ್ಲಿ ಆಸನಗಳ ವ್ಯವಸ್ಥೆ ಬಗ್ಗೆ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ತುಂಬು ತೊಳಿನ ಶರ್ಟ್ ಧರಿಸಬಾರದು.
ಪರೀಕ್ಷಾ ಕೇಂದ್ರಗಳು: ಮೋತಿ ವೀರಪ್ಪ ಸರ್ಕಾರಿ ಪಿಯು ಕಾಲೇಜ್, ರಾಜನಹಳ್ಳಿ ಸೀತಮ್ಮ ಸರ್ಕಾರಿ ಮಹಿಳಾ ಪಿಯು ಕಾಲೇಜು, ಬಾಲಕರ ಸರ್ಕಾರಿ ಪಿಯು ಕಾಲೇಜು, ಡಾ. ಶಾಮನೂರು ಶಿವಶಂಕರಪ್ಪ ಪಿಯು ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಸಮಯ: ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 (ಪತ್ರಿಕೆ 1), ಮಧ್ಯಾಹ್ನ 2.30 ರಿಂದ ಸಂ 4.30 (ಪತ್ರಿಕೆ 2 ) ನಡೆಸಲಾಗುವುದು ಎಂದರು.




