ಬೆಂಗಳೂರು: ಲೋಕಸಭೆ ಚುನಾವಣೆ ಮತದಾನ ನಡೆಯುತ್ತಿರುವ ಸಮಯದಲ್ಲೇ ತನ್ನ ಆಪ್ತನ ಮನೆಯಲ್ಲಿ 4.8 ಕೋಟಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಚಿಕ್ಕಬಳ್ಳಾಪುರದ ಫ್ಲೈಯಿಂಗ್ ಸ್ಕ್ವಾಡ್ ತಂಡ (ಎಫ್ಎಸ್ಟಿ) ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. 4.8 ಕೋಟಿ ರೂ. ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್ಎಸ್ಟಿ ವಶಪಡಿಸಿಕೊಂಡಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ರಾಜ್ಯ ಕಣ್ಗಾವಲು ತಂಡ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ವಿರುದ್ಧ ಏಪ್ರಿಲ್ 25ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.
ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪದ ಮೇರೆಗೆ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿ ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಯೋಗ ಪೋಸ್ಟ್ ಮಾಡಿದೆ.




