ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ವಿಮಾನ ನಿಲ್ದಾಣಗಳ ನಿರ್ಮಾಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಹಲವು ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನು ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
219 ಕೋಟಿ ರೂ. ವೆಚ್ಚದಲ್ಲಿ, 322 ಎಕರೆ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಕಾಮಗಾರಿ ಆರಂಭಕ್ಕೆ ತಾಂತ್ರಿಕ ಅಡಚಣೆಗಳಿದ್ದು ತಕ್ಷಣ ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಅಗತ್ಯ ಬಿದ್ದರೆ ದೆಹಲಿಗೂ ಹೋಗಿ ಬರಬೇಕು. ರಾಯಚೂರು ವಿಮಾನ ನಿಲ್ದಾಣ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಯೋಜನೆಗೆ ಬೇಕಾಗಿರುವ ಪರಿಸರ ಇಲಾಖೆಯ ಅನುಮತಿಯನ್ನು ಕೂಡ ಬೇಗನೆ ಪಡೆಯಬೇಕು ಎಂದರು.
ಹಾಸನ ವಿಮಾನ ನಿಲ್ದಾಣದ ಕಾಮಗಾರಿ ಚುರುಕಾಗಿ ಮುಗಿಸಬೇಕು. ಭೂಸ್ವಾಧೀನದ ಸಮಸ್ಯೆ ಇದ್ದು ತಕ್ಷಣ ಬಗೆಹರಿಸಲು ಸೂಚಿಸಿದ ಅವರು, ಉಡಾನ್ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ, ಪರ್ಯಾಯ ಕ್ರಮಗಳ ಬಗ್ಗೆ ತೀರ್ಮಾನಿಸಬೇಕು. ಪುನಃ ಉಡಾನ್ ಯೋಜನೆ ಚಾಲನೆಗೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.
ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು, ಅಗತ್ಯ ಇರುವ ಅಗ್ನಿಶಾಮಕ ವಾಹನಗಳನ್ನು ಖರೀದಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಲು ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನಕ್ಕೂ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.
ಪ್ರವಾಸೋದ್ಯಮವನ್ನು ಪರಿಗಣಿಸಿ ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ ಮತ್ತು ಹಂಪೆಯಲ್ಲಿ ಏರ್-ಸ್ಟ್ರಿಪ್ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಈ ಪೈಕಿ ಕೊಡಗು ಮತ್ತು ಧರ್ಮಸ್ಥಳದಲ್ಲಿ 140 ಎಕರೆ ಭೂಮಿ ಅಗತ್ಯವಿದೆ. ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಜತೆ ವ್ಯವಹರಿಸಿ, ಈ ಪ್ರಕ್ರಿಯೆ ಮುಗಿಸಬೇಕು ಎಂದರು.
ಚಿಕ್ಕಮಗಳೂರಿನಲ್ಲಿ ಈ ಯೋಜನೆಗೆ ಈಗಾಗಲೇ 12೦ ಎಕರೆ ಜಾಗ ಗುರ್ತಿಸಲಾಗಿದೆ. ಆದರೆ ಇದಕ್ಕೆ ಇನ್ನೂ 17.5 ಎಕರೆ ಅಗತ್ಯವಿದ್ದು, ಇದನ್ನು ಗುರುತಿಸಲು ನಿರ್ದೇಶಿಸಲಾಗಿದೆ. ಜತೆಗೆ ಈ ಸಂಬಂಧ ಡಿಪಿಆರ್ ಸಿದ್ಧಪಡಿಸಲು ಪವನ್ ಹನ್ಸ್ ಕಂಪನಿಗೆ ಹೇಳಲಾಗಿದೆ ಎಂದರು.
ಕಾರವಾರದಲ್ಲಿ ಸಿವಿಲ್ ಎನ್ಕ್ಲೇವ್ ಅಭಿವೃದ್ಧಿಗೆ ಇನ್ನೂ 97 ಎಕರೆ ಭೂಮಿ ಬೇಕಾಗಿದೆ. ಇದಕ್ಕಾಗಿ ಈಗಾಗಲೇ 27.34 ಕೋಟಿ ರೂಪಾಯಿಗೂ ಹೆಚ್ಚು ಹಣ ಕೊಡಲಾಗಿದೆ ಎಂದರು.




