ಆಗಸ್ಟ್ 15 ಮತ್ತು ಜನವರಿ 26ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವದ ಪವಿತ್ರ ದಿನಗಳಂದು ರಾಜ್ಯದ ಮತ್ತು ದೇಶದ ಎಲ್ಲಾ ಶಾಲಾ, ಕೆಲವು ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಧ್ವಜವನ್ನ ಹಾರಿಸಿ ರಾಷ್ಟ್ರಗೀತೆಯನ್ನು ಹೇಳಿ ಗೌರವವನ್ನು ಸಲ್ಲಿಸುತ್ತಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಆದರೆ ಸರ್ಕಾರಿ ನೌಕರರು ಮತ್ತು ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ಈ ಎರಡು ದಿನಗಳಲ್ಲಿ ಬೆರಳೆಣಿಕೆಯಷ್ಟು ಜನರು ಹಾಜರಿದ್ದು ಕಾರ್ಯಕ್ರಮವನ್ನು ನೆರವೇರಿಸುತ್ತಾರೆ. ಆದುದರಿಂದ ಎರಡು ದಿನಗಳಂದು ಎಲ್ಲ ಸರ್ಕಾರಿ ಕಚೇರಿಗಳ ನೌಕರರು ಮತ್ತು ಕಾಲೇಜ್, ವಿಶ್ವವಿದ್ಯಾನಿಲಯದ ಸಿಬ್ಬಂದಿ ತಪ್ಪದೆ ಹಾಜರಾಗಿ ಇರಬೇಕೆಂಬ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹೊರಡಿಸಿ.
ಇಲ್ಲದಿದ್ದರೆ ಈ ಎರಡು ದಿನಗಳು ಕೇವಲ ಶಾಲಾ ಮಕ್ಕಳಿಗೆ ಮಾತ್ರ ಸೀಮಿತವಾದ ಕಾರ್ಯಕ್ರಮಗಳಾಗುತ್ತವೆ. ಸರ್ಕಾರದ ರಜಾ ದಿನವನ್ನು ಬೇರೆ ರೀತಿಯ ಹಬ್ಬದಂತೆ ಮನೆಯಲ್ಲಿ ಕುಳಿತು ಆಚರಿಸುವಂತಿಲ್ಲ. ಎರಡು ದಿನಗಳಲ್ಲಿ ಸಾರ್ವಜನಿಕವಾಗಿಯೇ ಕಾರ್ಯಕ್ರಮವನ್ನು ನಡೆಸಬೇಕಾಗಿದೆ.
ಇಷ್ಟು ವರ್ಷಗಳ ಕಾಲ ಇರುವಂತಹ ಪದ್ಧತಿಯನ್ನು ಬದಲಾಯಿಸಿ ಕಡ್ಡಾಯವಾಗಿ ಎಲ್ಲರೂ ಕಚೇರಿಗೆ ಆಗಮಿಸಬೇಕೆಂಬ ಆದೇಶವನ್ನು ಕೂಡಲೇ ಹೊರಡಿಸಿದರೆ ಸ್ವಾತಂತ್ರ್ಯೋತ್ಸವದ ದಿನ ಇನ್ನೂ ನಾಲ್ಕು ದಿನ ಬಾಕಿ ಇರುವಾಗ ವ್ಯವಸ್ಥೆ ಬದಲಾಗಲು ಸಾಧ್ಯವಾಗುತ್ತದೆ.
– ಕೆ ಎಸ್ ನಾಗರಾಜ್, ಬೆಂಗಳೂರು



