ಕಾರವಾರ: ಬಾಲ್ಯದಿಂದಲೇ ಚೆಸ್ ಆಡುವುದರಿಂದ ಮಕ್ಕಳಲ್ಲಿ ಕಲಿಕೆ, ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಮಕ್ಕಳಿಂದ ವಯೋವೃದ್ಧರವರೆಗೂ ಚೆಸ್ ಪಾರ್ಕ್ ನ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲೆಂಟ್ ಆಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಸೈಲ್ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಚಿತ್ತಾಕುಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರಠಾ ಶಾಲೆ ಆವರಣದಲ್ಲಿ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಕಾರವಾರ ಹಾಗೂ ಚಿತ್ತಾಕುಲಾ ಗ್ರಾಮ ಪಂಚಾಯತ ಸಹಯೋಗದಿಂದ ಚಿತ್ತಾಕುಲ ಚೆಸ್ ಕ್ಲಬ್ (ಸಿ-3) ಮತ್ತು ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದರು.
ಚೆಸ್ ಆಡುವ ಮೂಲಕ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದ್ದು, ಸ್ಥಳೀಯ ಎಲ್ಲಾ ವಯೋಮಾನದವರು ಈ ಪಾರ್ಕ್ ಗೆ ಬಂದು ಚೆಸ್ ಆಡುವ ಮೂಲಕ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಅನೇಕ ಯೋಜನೆಗಳ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮಾಡುತ್ತಾ ಬಂದಿದೆ. ಅಭಿವೃದ್ಧಿ ಕಾರ್ಯ ಮಾಡಬೇಕಾದರೆ ಆಕ್ಷೇಪಣೆ ಮಾಡುವುದು ಒಳೆಯದಲ್ಲ. ಅಭಿವೃದ್ಧಿ ಹೊಂದಿದಾಗ ಮಾತ್ರ ಸ್ಥಳಿಯರಿಗೆ ಉದ್ಯೋಗವಕಾಶ ದೊರೆಯಲು ಸಾಧ್ಯ . ಆದ್ದರಿಂದ ಅಭಿವೃದ್ಧಿ ಕಾರ್ಯದಲ್ಲಿ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಪಕ್ಷಾತೀತವಾಗಿ ಎಲ್ಲರೂ ಸಹಕಾರ ನೀಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಮಾತನಾಡಿ, ಚೆಸ್ ಪಾರ್ಕ್ ನ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಚೆಸ್ ಕೇವಲ ಆಟವಲ್ಲ ಮೈಂಡ್ ಗೇಮ್ ಆಟವಾಗಿದ್ದು, ಯಾವ ಹಂತದಲ್ಲಿ ಯಾವ ಕಾಯಿ ಮುನ್ನೆಡಸಬೇಕು, ಯಾವ ರೀತಿ ಆಡಬೇಕು ಎನ್ನುವುದರ ಯೋಜನೆ ರೂಪಿಸಿ ಆಡುವ ಆಟವಾಗಿದೆ. ಈ ಆಟ ಜೀವನಕ್ಕೂ ಅನ್ವಯವಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಜೀವನದಲ್ಲಿ ಯಾವ ಸಮಯದಲ್ಲಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದು ಈ ಆಟದಲ್ಲಿ ತಿಳಿಯುತ್ತದೆ. ಈ ಆಟದಿಂದ ಬುದ್ದಿಮತ್ತೆ ಹೆಚ್ಚಾಗಿ ಜವಾಬ್ದಾರಿಯುತ ಮನುಷ್ಯನಾಗಿ ಮಾಡುತ್ತದೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಮಾತನಾಡಿ, ಆಡಳಿತ ವ್ಯವಸ್ಥೆಯಲ್ಲಿ ಎಲ್ಲರ ಸಹಕಾರವಿದ್ದಾಗ ಮಾತ್ರ ವಿನೂತನ ರೀತಿಯ ಯೋಜನೆಗಳನ್ನು ರೂಪಿಸಿ ಕಾರ್ಯ ರೂಪಕ್ಕೆ ತರಲು ಸಾಧ್ಯ. ಎಲ್ಲರ ಸಹಕಾರದಿಂದ ಚೆಸ್ ಪಾರ್ಕ್ ನಿರ್ಮಾಣವಾಗಿದೆ. ಚೆಸ್ ಕೇವಲ ಆಟವಾಗಿರದೇ ಮಾನಸಿಕ ಸಾಮರ್ಥ್ಯ, ಸಮಸ್ಯೆಗಳನ್ನು ಬಗೆಹರಿಸುವ, ಯೋಜನೆಗಳನ್ನು ರೂಪಿಸುವ, ಸಾಮರ್ಥ್ಯವನ್ನು ವೃದ್ಧಿಸುವ ಮೂಲಕ ಗುರಿ ಸಾಧನೆಗೆ ಬೇಕಾದ ಎಲ್ಲಾ ಜ್ಞಾನವನ್ನು ಈ ಆಟದ ಮೂಲಕ ಪಡೆಯಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ ಉತ್ತಮ ಪ್ರತಿಭೆಗಳಿವೆ ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಅವಶ್ಯಕತೆಯಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಸಲಾಗುತ್ತಿದೆ. ಚೆಸ್ ಕ್ರೀಡೆಗೆ ಉತ್ತೇಜನ ನೀಡಲು ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ, ಕುಮಟಾ ತಾಲೂಕಿನ ಹೆಗಡೆ ಹಾಗೂ ಕಾರವಾರ ತಾಲೂಕಿನ ಚಿತ್ತಾಕುಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಚೆಸ್ ಪಾರ್ಕ್ ನಿರ್ಮಾಣ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಕಡೆ ಮಾಡುವ ಉದ್ದೇಶವಿದೆ ಎಂದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ, ಕನಿಷ್ಕ ಜಿಲ್ಲಾ ಪಂಚಾಯತ ನ ನಿವೃತ್ತ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ತಾಲ್ಲೂಕು ಪಂಚಾಯತ ಆಡಳಿತಾಧಿಕಾರಿ, ಸೋಮಶೇಖರ ಮೆಸ್ತಾ, ಕಾರ್ಯನಿರ್ವಹಣಾಧಿಕಾರಿ ವೀರನಗೌಡ, ಚಿತ್ತಾಕುಲ ಗ್ರಾಮ ಪಂಚಾಯತ ಅಧ್ಯಕ್ಷ ನಿತೀನ ಬಾಂದೇಕರ, ಉಪಾಧ್ಯಕ್ಷ ಸೂರಜ ದೇಸಾಯಿ ಮತ್ತಿತರರು ಹಾಜರಿದ್ದರು.




