ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಉದ್ದೇಶಿತ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ನವೆಂಬರ್ 16ರಂದು ಪಥಸಂಚಲನೆ ನಡೆಸಲು ಷರತ್ತುಬದ್ಧ ಅನುಮತಿ ಕೊಟ್ಟಿದೆ. ಭಾನುವಾರ ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಆರ್ ಎಸ್ ಎಸ್ ಗಣವೇಷಧಾರಿಗಳ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ಕೊಟ್ಟಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠದ ನ್ಯಾ. ಎಂ.ಜಿ.ಎಸ್ ಕಮಲ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಪಥಸಂಚಲನದಲ್ಲಿ 300 ಗಣವೇಷಧಾರಿಗಳು ಹಾಗೂ 50 ಘೋಷ್ ವೃಂದಕ್ಕೆ ಅವಕಾಶ ನೀಡಲಾಗಿದೆ ಎಂದು ಆದೇಶ ನೀಡಿ ಅರ್ಜಿಯನ್ನು ಇತ್ಯರ್ಥ ಮಾಡಿದರು.
ಅಕ್ಟೋಬರ್ 19ರಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಅನುಮತಿ ಕೇಳಿತ್ತು. ಅದೇ ದಿನದಂದು ಕೆಲವು ದಲಿತ ಪರ ಮತ್ತು ಸಮಾನತೆಯ ಪರ ಸಂಘಟನೆಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚಿತ್ತಾಪುರ ತಹಶೀಲ್ದಾರ್ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ನೀಡಲು ನಿರಾಕರಿಸಿದ್ದರು. ಈ ವಿಷಯವನ್ನು ಪ್ರಶ್ನಿಸಿ ಆರ್ ಎಸ್ ಎಸ್ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇವೆಲ್ಲ ಘಟನೆಗಳು ನಡುವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸರ್ಕಾರಿ ಕಟ್ಟಡಗಳ ಆವರಣದಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆಗಳಿಗೆ ತಡೆ ಹೇರುವಂತೆ ಕೋರಿದ್ದರು. ಈ ಪತ್ರ ಪರಸ್ಪರ ಕಾಲೆಳೆತಕ್ಕೆ ಕಾರಣವಾಗಿತ್ತು. ಕೆಲವು ಸುದ್ದಿ ಸಂಸ್ಥೆಗಳು ಆರ್ ಎಸ್ ಎಸ್ ಅನ್ನು ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ್ದವು.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಸದಸ್ಯರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸಲು ವೇದಿಕೆ ಸಿದ್ಧಮಾಡಿಕೊಳ್ಳಲು ರೂಪುರೇಷೆಗಳನ್ನು ಹೆಣೆದಿದ್ದು, ಇದಕ್ಕೆ ಉದ್ದೇಶಿತ ಪಥಸಂಚಲನ ಮುನ್ನುಡಿ ಎಂಬಂತೆ ತೋರಿಸಲು ಸನ್ನದ್ಧರಾಗಿದ್ದರು. ಆದರೆ ವಿಷಯ ಕೋರ್ಟ್ ಮೆಟ್ಟಿಲೇರಿ ಕೊನೆಗೂ ಷರತ್ತುಬದ್ಧ ಪಥಸಂಚಲನಕ್ಕೆ ಅನುಮತಿ ಸಿಕ್ಕಿದೆ.



