ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೂಚನೆ
ಬಳ್ಳಾರಿ: ಜಿಲ್ಲೆಯಲ್ಲಿ ಇದೇ ಜೂ.14 ರಿಂದ 22 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅಧಿಕಾರಿಗಳಿಗೆ ಸೂಚಿಸಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ಪೂರ್ವ ಸಿದ್ದತೆ ಕ್ರಮಗಳ ಕುರಿತು ನಗರದ ಜಿಲ್ಲಾ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
20 ಪರೀಕ್ಷಾ ಕೇಂದ್ರಗಳಿಗೆ 20 ಮುಖ್ಯ ಅಧೀಕ್ಷಕರು, 20 ಪರೀಕ್ಷಾ ಕೇಂದ್ರಗಳ ಮಾರ್ಗಗಳಿಗೆ 07 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಾರ್ಗಾಧಿಕಾರಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ವಿತರಿಸಬೇಕು. ತಾಲ್ಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಉತ್ತರ ಪತ್ರಿಕೆಗಳನ್ನು ರವಾನಿಸುವ ಸಮಯದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದರು.
ಮಾರ್ಗಾಧಿಕಾರಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಾಗ್ರಿ ತಲುಪಿಸಲು 07 ವಾಹನ ಒದಗಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ವೇಳೆಯಲ್ಲಿ ತುರ್ತು ಚಿಕಿತ್ಸೆ ಸಂಬಂಧ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹೇಳಿದರು.
ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ಸಾರಿಗೆ ವ್ಯವಸ್ಥೆ, ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಒದಗಿಸಬೇಕು. ಅದೇ ರೀತಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಳ್ಳಲು 20 ಕ್ಯಾಂಪ್ ಕಸ್ಟೊಡಿಯನ್, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಮಾತನಾಡಿ, ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-1ರನ್ನು ನಡೆಸಲಾಗಿದ್ದು, ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಅಗತ್ಯ ಪೂರ್ವ ಸಿಧ್ಧತೆಯನ್ನು ಮಂಡಳಿಯ ಸುತ್ತೋಲೆಯ ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸುವಂತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ತಿಳಿಸಿದರು.
ಪರೀಕ್ಷೆ-2 ಗೆ ನೋಂದಾಯಿಸಿದ ವಿದ್ಯಾರ್ಥಿಗಳ ಮಾಹಿತಿ:
ಜಿಲ್ಲೆಯಲ್ಲಿನ ಒಟ್ಟು 310 ಹತ್ತನೇ ತರಗತಿಯ ಶಾಲೆಗಳಿಂದ 7591 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ-2 ಗೆ ನೋಂದಾಯಿಸಿಕೊಂಡಿದ್ದಾರೆ. ಬಳ್ಳಾರಿ ಪೂರ್ವ-3169, ಬಳ್ಳಾರಿ ಪಶ್ಚಿಮ-1191, ಸಂಡೂರು-905, ಸಿರುಗುಪ್ಪ-2326.
ಪರೀಕ್ಷಾ ಕೇಂದ್ರಗಳ ಮಾಹಿತಿ:
ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಅದರಲ್ಲಿ 02 ಅತಿ ಸೂಕ್ಷ್ಮ, ಸೂಕ್ಷ್ಮ-04 ಕೇಂದ್ರಗಳನ್ನಾಗಿ ಗುರುತಿಸಲಾಗಿದೆ, 14 ಸಾಮಾನ್ಯ ಪರೀಕ್ಷಾ ಕೇಂದ್ರಗಳಿವೆ. 338 ಕೊಠಡಿಗಳನ್ನು ಪರೀಕ್ಷಾ ಕೊಠಡಿಗಳನ್ನಾಗಿ ತೆಗೆದುಕೊಳ್ಳಲಾಗಿದೆ ಹಾಗೂ 6 ಅಡಿ ಅಂತರದಲ್ಲಿ ಒಟ್ಟು 3,796 ಡೆಸ್ಕ್ಗಳ ಆಸನ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕ ಎ.ಕೆ. ಸತ್ಯನಾರಾಯಣ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.




